ನೂತನ ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕಾರ: ನಾಳೆಯಿಂದ 2 ದಿನ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ

ಬೆಂಗಳೂರು

ಬೆಂಗಳೂರು: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ನಾಳೆ ದೆಹಲಿಗೆ ತೆರಳಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 10 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದು,

ನಾಳೆ ಬೆಳಗ್ಗೆ 10 ಗಂಟೆ ಕೆಂಪ ದೆಹಲಿಗೆ ತೆರಳಲಿದ್ದಾರೆ ನಾಳೆ ಬಿಜೆಪಿ ಆಡಳಿತ ಇರುವ ರಾಜ್ಯಗಳ ಜೊತೆಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಸಭೆ ಬಳಿಕ ನಾಳೆ ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ರಾಷ್ಟ್ರದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕೇಂದ್ರ ಸಚಿವರನ್ನು ಭೇಟಿಯಾಗಿ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.

Leave a Reply

Your email address will not be published.