ಮುಂದಿನ ಸಿಎಂ ಹೇಳಿಕೆ ಮೊದಲು ಕೊಟ್ಟವರೇ ಅವರು: ಡಿಕೆಶಿಗೆ ಜಮೀರ್ ಅಹ್ಮದ್ ತಿರುಗೇಟು

ಬೆಂಗಳೂರು

ಬೆಳಗಾವಿ: ರಾಜ್ಯದಲ್ಲಿ ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾ ಬಯಸುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಯಾರು ತೀರ್ಮಾನ ಮಾಡಕ್ಕಾಗಲ್ಲ. ನಮ್ಮ ನಾಯಕಿ ಸೋನಿಯಾ ಗಾಂಧಿ ಇದ್ದಾರೆ. ನನ್ನ ಅಭಿಪ್ರಾಯ ಹೇಳೋದು ತಪ್ಪೇನಿಲ್ಲವಲ್ಲ. ನಮ್ಮ ಸಂವಿಧಾನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದರು.

ಯಾರೇ ಇದ್ರು ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬ ಡಿಕೆಶಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯೆ ಕೊಟ್ಟ ಅವರು, ಇದನ್ನ ಚಾಲನೆ ಯಾರು ಕೊಟ್ಟಿದ್ದು? ಅವರು ಹೇಳಿದ್ಮೇಲೆ ತಾನೇ ಬಂದಿದ್ದು. ಅಧ್ಯಕ್ಷರು ನಮ್ಮ ಒಕ್ಕಲಿಗ ಸಮಾಜ ಕಾರ್ಯಕ್ರಮದಲ್ಲಿ ಅವರಾಗಿ ಅವರು ನನಗೆ ಮುಂದೆ ಅವಕಾಶ ಕೊಡಿ ಎಂದು ಚಾಲನೆ ಕೊಟ್ಟಿದ್ದಾರೆ. ಕೇಳಿದ್ದು ಅವರೇ ತಾನೇ? ಎಂದು ಡಿಕೆಶಿಗೆ ಪ್ರಶ್ನೆ ಮಾಡಿದರು.

ಎಲ್ಲರೂ ಕ್ಲೇಮ್ ಮಾಡೋದು ಸಹಜ. ಎಲ್ಲರಿಗೂ ಆಸೆ ಇರುತ್ತದೆ. ಬಹಳ ಜನರಿಗೆ ಆಸೆ ಇದೆ. ಆಸೆ ಇರೋದ್ರಲ್ಲಿ ತಪ್ಪೇನಿಲ್ಲ. ಮೊನ್ನೆ ನಾನು ಹೇಳಿದ್ದೀನಿ ಮುಸ್ಲಿಂರಿಗೂ ಅವಕಾಶ ಸಿಗಬೇಕು. ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ನಾವು ಜನಸಂಖ್ಯೆಯನುಸಾರ ಶೇಕಡಾ.15ರಷ್ಟು ಇದ್ದೇವೆ ಎಂದು ತಿಳಿಸಿದರು.

Leave a Reply

Your email address will not be published.