ನ್ಯಾ. ಎಚ್‌.ಸಿ ಸಂದೇಶ್‌ ಭೇಟಿ ಮಾಡಿದ ಎಎಪಿ ಕಾನೂನು ಘಟಕ -ನೈತಿಕ ಬೆಂಬಲ ಘೋಷಿಸಿದ ಎಎಪಿ

ಬೆಂಗಳೂರು

ನ್ಯಾ. ಎಚ್‌.ಸಿ.ಸಂದೇಶ್‌ ಅವರನ್ನು ಎಎಪಿಯ ರಾಜ್ಯ ಕಾನೂನು ಘಟಕ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ನೈತಿಕ ಬೆಂಬಲ ಘೋಷಿಸಿವೆ. ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಹೈಕೋರ್ಟ್‌ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಘಟನೆ ನಡೆದಿರುವುದು ಅತ್ಯಂತ ಆಘಾತಕಾರಿ ಬೆಳವಣಿಗೆ. ಭ್ರಷ್ಟ ಬಿಜೆಪಿಯ 40% ಸರ್ಕಾರವು ಉಚ್ಚನ್ಯಾಯಾಲಯವನ್ನೂ ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಅವ್ಯಾಹತವಾಗಿ ಅಕ್ರಮ ನಡೆಸಲು ಯತ್ನಿಸುತ್ತಿದೆ. ನ್ಯಾಯಾಧೀಶರ ಮೇಲೆ ಒತ್ತಡ ಹಾಕುವ ಮೂಲಕ ಸಂವಿಧಾನದ ಆಶಯವನ್ನು ಬುಡಮೇಲು ಮಾಡುತ್ತಿದೆ. ಸರ್ಕಾರದ ಕುತಂತ್ರಕ್ಕೆ ಮಣಿಯದ ನ್ಯಾ. ಎಚ್‌.ಸಿ.ಸಂದೇಶ್‌ರವರಿಗೆ ಪಕ್ಷವು ನೈತಿಕ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದಾರೆ

 

 

 

Leave a Reply

Your email address will not be published.