ಎಣ್ಣೆ ವಿಚಾರಕ್ಕೆ ಸ್ನೇಹಿತರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ..!

ಬೆಂಗಳೂರು

ಬೆಂಗಳೂರು: ಮದ್ಯದ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಜಗಳ ಓರ್ವನ ಬರ್ಬಲ ಹತ್ಯೆಯಾಗುವ ಮೂಲಕ ಕೊನೆಗೊಂಡ ಘಟನೆ ಬೆಂಗಳೂರಿನ ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ನಡೆದಿದೆ. 30 ವರ್ಷದ ಪ್ರಶಾಂತ್ ಎಣ್ಣೆ ವಿಚಾರದಲ್ಲಿ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ಎಣ್ಣೆ ವಿಚಾರಕ್ಕೆ ಪ್ರಶಾಂತ್ ಮತ್ತು ಆತನ ಸ್ನೇಹಿತನ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿದ್ದಲ್ಲದೆ ಕೋಪದಿಂದ ಪ್ರಶಾಂತ್​ಗೆ ಬಾಟಲಿಯಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ. ಘಟನೆ ಸಂಬಂಧ ಮಾಹಿತಿ ತಿಳಿದ ಸಿಟಿ ಮಾರ್ಕೆಟ್ ಠಾಣಾ ಪೊಲೀಸರು, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ

 

Leave a Reply

Your email address will not be published.