Home KARNATAKA ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಸಂಪೂರ್ಣ ಲಾಕ್ ಡೌನ್ – ಸಿಎಂ...

ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಸಂಪೂರ್ಣ ಲಾಕ್ ಡೌನ್ – ಸಿಎಂ ಆದೇಶ,

175
0
SHARE

ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ದಿನಾಂಕ: 14.07.2020ರ ಮಂಗಳವಾರ ರಾತ್ರಿ 8.00 ಗಂಟೆಯಿಂದ  1 ವಾರಗಳ ಕಾಲ ಅಂದರೆ  ದಿನಾಂಕ: 22.07.2020 ರ ಬೆಳಿಗ್ಗೆ 5.00 ಗಂಟೆಯವರೆಗೆ ಬೆಂಗಳೂರು ನಗರ  ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧಿ, ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ.  ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು  ನಡೆಯಲಿವೆ.

ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್‍ಡೌನ್ ಸಂಧರ್ಬದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ.

ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಹಗಲಿರಳು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಮತ್ತು ಪೋಲಿಸ್ ಸಿಬ್ಬಂದಿಗಳು ಹಾಗೂ ಎಲ್ಲಾ ಅಧಿಕಾರಿಗಳು, ಸ್ವಯಂ ಸೇವಕರು ಮನೆ ಮನೆಗೂ ಕೋವಿಡ್-19 ಕುರಿತು ಮಾಹಿತಿ ನೀಡುತ್ತಿರುವ ಪತ್ರಕರ್ತರು ಮತ್ತು  ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ನಾನು ಇನ್ನೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಇದೆ ಸಂದರ್ಭದಲ್ಲಿ ಸಿಎಂ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here