ವಿಪಕ್ಷ & ಸಾರ್ವಜನಿಕರ ಟೀಕೆಗೆ ಮಣಿದ ಸರ್ಕಾರ: ರಾತ್ರೋ ರಾತ್ರಿ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

ಬೆಂಗಳೂರು

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವುದು ಮತ್ತು ವಿಡಿಯೊ ಚಿತ್ರೀಕರಿಸುವುದನ್ನು ನಿಷೇಧಿಸಿ ಹೊರಡಿಸಲಾಗಿದ್ದ ಆದೇಶವನ್ನು ಸರ್ಕಾರ ಒಂದೇ ದಿನದಲ್ಲಿ ಹಿಂದಕ್ಕೆ ಪಡೆದು ತಡರಾತ್ರಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ರಾಜ್ಯದಲ್ಲಿನ ಗ್ರಾಮ ಪಂಚಾಯತ್​ನಿಂದ ಹಿಡಿದು ರಾಜಧಾನಿ ಹಂತದವರೆಗೂ ಬರುವ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು, ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಯ ಅನುಮತಿಯಿಲ್ಲದೇ ಫೋಟೋ ತಗೆಯುವಂತಿಲ್ಲ ಮತ್ತು ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ ಎಂದು ಡಿಪಿಎಆರ್ ಇಲಾಖೆ ಆದೇಶ ಹೊರಡಿಸಿತ್ತು. ಸರ್ಕಾರದ ಈ ವಿವಾದಾಸ್ಪದ ಆದೇಶಕ್ಕೆ ಸಾಮಾಜಿಕ ಮಾಧ್ಯಮಗಳು ಸೇರಿದಂತೆ ಹಲವೆಡೆ ವ್ಯಾಪಕ ಟೀಕೆ ಹಾಗೂ ಹೋರಾಟದ ಎಚ್ಚರಿಕೆ ಹೆಚ್ಚಿದ ಬೆನ್ನಲ್ಲೇ ಸರ್ಕಾರದ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ಹೊರಡಿಸಿದ್ದ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್​ ಪಡೆದಿದೆ..

 

Leave a Reply

Your email address will not be published.