ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ UKGಯಿಂದ PUC ತನಕ ಉಚಿತ ಶಿಕ್ಷಣ: ಎಚ್ ಡಿ ಕುಮಾರಸ್ವಾಮಿ ಘೋಷಣೆ

ಬೆಂಗಳೂರು

ಬೆಂಗಳೂರು: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ UKGಯಿಂದ PUC ತನಕ ಉಚಿತ ಶಿಕ್ಷಣ ಕೊಡಲಾಗುವುದು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ದಾಸರಹಳ್ಳಿಯಲ್ಲಿ ಮಾತನಾಡಿದ ಅವರು, ಈ ಬಾರಿ ಒಮ್ಮೆ ಅಧಿಕಾರ ಕೊಡಿ. ಪ್ರಾಮಾಣಿಕ ಆಡಳಿತ ಕೊಡುತ್ತೇನೆ. ನಿಮ್ಮ ನಿರೀಕ್ಷೆಗಳನ್ನು ಈಡೇರಿಸಿ ಬಲಿಷ್ಠ, ಸ್ವಚ್ಚ, ಸುಂದರ ಬೆಂಗಳೂರು ನಗರವನ್ನು ನಿರ್ಮಿಸುತ್ತೇನೆ. ದಾಸರಹಳ್ಳಿ ಮಾತ್ರವಲ್ಲ, ಅಕ್ಕಪಕ್ಕದ ಕ್ಷೇತ್ರಗಳು, ಬೆಂಗಳೂರಿನ 28 ವಿಧಾನಸಭೆ ಕ್ಷೇತ್ರಗಳಲ್ಲಿ ಕೂಡ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಪೋಷಕರು ಕಳಿಸುತ್ತಿಲ್ಲ. ಸರಕಾರ ಶಿಕ್ಷಣ ವ್ಯವಸ್ತೆಯನ್ನು ಹಾಳು ಮಾಡುತ್ತದೆ. ಪಾಠ ಮಾಡಲು ಶಿಕ್ಷಕರು ಇಲ್ಲ. ಬಡವರಿಗೆ ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಶಕ್ತಿ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ UKG ಯಿಂದ ಪಿಯುಸಿಯವರೆಗೂ ಉಚಿತ ಶಿಕ್ಷಣ ಕೊಡಲಾಗುವುದು ಎಂದರು. ನಗರದಲ್ಲಿ ಬಡವರು, ಮಧ್ಯಮ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಗಗನ ಕುಸುಮವಾಗಿದೆ. ಇದಕ್ಕೆ ಪರಿಹಾರವಾಗಿ ಪ್ರತಿ ವಾರ್ಡ್ ನಲ್ಲಿಯೂ ಗಲ್ಲಿ ಕ್ಲಿನಿಕ್ ತೆರೆಯಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

Leave a Reply

Your email address will not be published.