ಶೇ. 33ರಷ್ಟು ಸರ್ಕಾರಿ ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು: ಅಮಿತ್ ಶಾ ಭರವಸೆ

ರಾಷ್ಟ್ರೀಯ

ಅಗರ್ತಲಾ: ತ್ರಿಪುರಾದಲ್ಲಿ ಮಹಿಳೆಯರಿಗಾಗಿ 33% ಸರ್ಕಾರಿ ಉದ್ಯೋಗಗಳು, 200 ಕೋಟಿ ವೆಚ್ಚದಲ್ಲಿ ವಿಶ್ವವಿದ್ಯಾಲಯವನ್ನು ನಿರ್ಮಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದರು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರು ತ್ರಿಪುರಾದಲ್ಲಿ ಶೇ. 33ರಷ್ಟು ಸರ್ಕಾರಿ ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಘೋಷಿಸಿದರು.

ಈಶಾನ್ಯ ರಾಜ್ಯದಲ್ಲಿ ಬಿಜೆಪಿ-ಐಪಿಎಫ್‍ಟಿ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವದ ಅಂಗವಾಗಿ ಅಗರ್ತಲಾದಲ್ಲಿ ನಡೆದ ರ್ಯಾಲಿ ಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಪ್ಲಬ್ ದೇಬ್ ಅವರ ಆಡಳಿತವು ರಾಜಕೀಯ ಹಿಂಸಾಚಾರಕ್ಕೆ ಪೂರ್ಣ ವಿರಾಮ ಹಾಕಿದೆ. ನಾವು 200 ಕೋಟಿ ರೂಪಾಯಿ ವೆಚ್ಚದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತೇವೆ. ರಾಜ್ಯದ ಯುವಜನರಿಗಾಗಿ ಕೇವಲ 4 ವರ್ಷಗಳಲ್ಲಿ ಪ್ರತಿ ವ್ಯಕ್ತಿಯ ಆದಾಯವು 13% ರಿಂದ 1.30 ಲಕ್ಷಕ್ಕೆ ಏರಿದೆ ಎಂದು ಹೇಳಿದರು.

Leave a Reply

Your email address will not be published.