ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಸಾಧ್ಯತೆ..! ಮಾರ್ಚ್ 8ರ ಇಂಧನ ದರ ಎಷ್ಟು ಗೊತ್ತಾ..?

ತಂತ್ರಜ್ಞಾನ

ಉತ್ತರ ಪ್ರದೇಶ ಸೇರಿ ಪಂಚ ರಾಜ್ಯಗಳ ಚುನಾವಣೆ ಬೆನ್ನಲ್ಲೇ ಪೆಟ್ರೋಲ್‌ ಮತ್ತು ಡಿಸೇಲ್‌ ದರ ಗಗನ ಮುಟ್ಟುವ ಸಾಧ್ಯತೆ ಇದೆ.  ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​- ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ. ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ಆರಂಭವಾದ ಬಳಿಕ ಪೆಟ್ರೋಲ್, ಡೀಸೆಲ್ ದರ ಏರಿಕೆ ಆಗುತ್ತದೆ ಎಂಬ ಬಗ್ಗೆ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದರೆ, ಇಂದಿನವರೆಗೂ ಇಂಧನ ದರದಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ.  ಇಂದು ಕೂಡ ಇಂಧನಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

Leave a Reply

Your email address will not be published.