Home Latest ಕೊರೊನಾ ವಿರುದ್ಧ ನಮ್ಮ ಹೋರಾಟ ಇನ್ನೂ ಮುಗಿದಿಲ್ಲ. ನಿಯಮ ಪಾಲಿಸುವುದು ಬಹು ಮುಖ್ಯ ದೇಶದ ಜನರಲ್ಲಿ...

ಕೊರೊನಾ ವಿರುದ್ಧ ನಮ್ಮ ಹೋರಾಟ ಇನ್ನೂ ಮುಗಿದಿಲ್ಲ. ನಿಯಮ ಪಾಲಿಸುವುದು ಬಹು ಮುಖ್ಯ ದೇಶದ ಜನರಲ್ಲಿ ಪ್ರಧಾನಿ ಮೋದಿ ಮನವಿ

92
0
SHARE

ನವದೆಹಲಿ. ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟ ಹೆಚ್ಚಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಗರೀಬ್‌ ಕಲ್ಯಾಣ್‌ ಅನ್ನ ಯೋಜನೆಯಡಿ ಬಡವರಿಗೆ ನೀಡಲಾಗುತ್ತಿದ್ದ ಧಾನ್ಯದ ಯೋಜನೆಯನ್ನು ನವೆಂಬರ್‌ವರೆಗೂ ವಿಸ್ತರಣೆ ಮಾಡಲಾಗುವುದು. ಉಚಿತವಾಗಿ ಧಾನ್ಯ ವಿತರಣೆ ಮಾಡುವ ಯೋಜನೆಯನ್ನು ನವೆಂಬರ್‌ ಅಂತ್ಯದವರೆಗೆ ವಿಸ್ತರಣೆ ಮಾಡಲಾಗಿದೆ.

ಇದು ಸುಮಾರು 80 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದರು. ಲಾಕ್‌ಡೌನ್‌ ನಂತರ ವಲಸಿಗರ ಪ್ರಯಾಣ ಹೆಚ್ಚಾಗಿದೆ. ಹೀಗಾಗಿ ಒಂದು ದೇಶ, ಒಂದು ರೇಷನ್‌ ಯೋಜನೆ ಜಾರಿಗೆ ಬರುತ್ತಿದ್ದು, ಇದರಿಂದ ಯಾರೂ ಎಲ್ಲಿ ಬೇಕಾದರೂ ಪಡಿತರ ಪಡೆಯಬಹುದಾಗಿದೆ.

ಇನ್ನೂ ದೇಶದಲ್ಲಿ ಈಗ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿದೆ. ಅನ್‌ ಲಾಕ್ 2.0 ಕಾಲಘಟ್ಟಕ್ಕೆ ಕಾಲಿಡುತ್ತಿದ್ದೇವೆ. ಜತೆಗೆ ಮಳೆಗಾಲ ಕೂಡ ಬರುತ್ತಿದೆ. ಈ ಸಂದರ್ಭದಲ್ಲಿ ನೆಗಡಿ, ಕೆಮ್ಮು, ಜ್ವರ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಜನರ ನಿರ್ಲಕ್ಷ್ಯ ಕೂಡ ಹೆಚ್ಚಾಗುತ್ತಿರುವುದು ತೀವ್ರ ಆತಂಕ ಮೂಡಿಸಿದೆ ಎಂದು ಮೋದಿ ಕಳವಳ ವ್ಯಕ್ತಪಡಿಸಿದ್ರು.

ಕೊರೊನಾ ವಿರುದ್ಧ ನಮ್ಮ ಹೋರಾಟ ಇನ್ನೂ ಮುಗಿದಿಲ್ಲ. ನಿಯಮ ಪಾಲಿಸುವುದು ಎಲ್ಲರಿಗೂ ಮುಖ್ಯವಾಗಿದೆ ಎಂದು ದೇಶದ ಜನರಲ್ಲಿ ಪ್ರಧಾನಿ ಮನವಿ ಮಾಡಿದ್ರು..

LEAVE A REPLY

Please enter your comment!
Please enter your name here