
ಕಳಪೆ ರಸ್ತೆ ಕಾಮಗಾರಿ: ಇಬ್ಬರು ಇಂಜಿನಿಯರ್ ಗಳ ಅಮಾನತುಗೊಳಿಸಿ BBMP ಆದೇಶ
ಬೆಂಗಳೂರು: ಪ್ರಧಾನಿ ಮೋದಿ ರಾಜ್ಯ ಪ್ರವಾಸ ವೇಳೆ ಬೆಂಗಳೂರಿನಲ್ಲಿ ನಿರ್ಮಾಣ ಮಾಡಿದ್ದ ರಸ್ತೆ ಕಳಪೆ ಕಾಮಗಾರಿ ಹಿನ್ನೆಲೆ ಇಬ್ಬರು ಇಂಜಿನಿಯರ್ ಗಳನ್ನು ಅಮಾನತು ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಪ್ರಧಾನಿ ಮೋದಿ ರಾಜ್ಯ ಪ್ರವಾಸದ ವೇಳೆ ಕಳಪೆ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರು ಇಬ್ಬರು ಇಂಜಿನಿಯರ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎ.ರವಿ ಹಾಗೂ ಸಹಾಯಕ ಅಭಿಯಂತರ ವಿಶ್ವಾಸ್ ಐ.ಕೆ ಅಮಾನತು ಮಾಡಿ ಬಿಬಿಎಂ ಆದೇಶ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಜೂನ್ 20ರಂದು ಬೆಂಗಳೂರಿಗೆ ಬಂದಾಗ, ಅವರು ಸಂಚರಿಸುವ ರಸ್ತೆಗಳು ಲಕಲಕ ಅಂತ ಹೊಳೆಯುತ್ತಿದ್ದವು. ಆದರೆ ಮೋದಿ ವಾಪಸ್ ಹೋದ್ಮೇಲೆ ತರಾತುರಿಯಲ್ಲಿ ಮಾಡಿದ್ದ ರಸ್ತೆಗಳು ಅದ್ವಾನ ಎದ್ದುಹೋಗಿದ್ದವು. 23 ಕೋಟಿ ರೂಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿದ ರಸ್ತೆಯ ಸ್ಥಿತಿ ನೋಡುವಂತಿಲ್ಲ. ಬಿಬಿಎಂಪಿ ಡಾಂಬರ್ ರಸ್ತೆ ಕಳಪೆ ಕಾಮಗಾರಿ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಹೀಗಾಗಿ ರಾಜ್ಯ ಸರ್ಕಾರಕ್ಕೆ, ಪ್ರಧಾನಿ ಕಾರ್ಯಾಲಯ ವರದಿ ಕೇಳಿದ್ದು ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಸಿಎಂ ಕಚೇರಿ ಸೂಚನೆ ನೀಡಲಾಗಿತ್ತು.