Presidential Election.. ವೀಲ್ ಚೇರ್ ನಲ್ಲಿ ಬಂದು ಮತಚಲಾಯಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಬೆಂಗಳೂರು

ಭಾರತದ 15ನೇ ರಾಷ್ಟ್ರಪತಿ ಚುನಾವಣೆ ಸೋಮವಾರ ಭರದಿಂದ ಸಾಗಿದ್ದು, ದೇಶಾದ್ಯಂತ ಗಣ್ಯರು ಮತ ಚಲಾಯಿ ಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದ್ದು, ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ವ್ಹೀಲ್‌ಚೇರ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಸಂಸತ್ತಿನ ಆವರಣದಲ್ಲಿ ಚುನಾವಣೆಗೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ದೇವೇಗೌಡರು ಕಾಲು ನೋವಿನ ಹಿನ್ನೆಲೆ ವ್ಹೀಲ್ ಚೇರ್‌ನಲ್ಲಿ ಮತ ಚಲಾಯಿಸಲು ಆಗಮಿಸಿದ್ದರು. ಮತದಾನ ಮಾಡಿದ ಬಳಿಕ ದೇವೇಗೌಡರು ವಾಪಸ್ಸಾಗಿದ್ದಾರೆ.  ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಪಕ್ಷದ ರಾಜಕಾರಣವನ್ನು ಮೀರಿ ಬೆಂಬಲ ನೀಡುವುದಾಗಿ ಜೆಡಿಎಸ್ ಸರ್ವಾನುಮತದ ನಿರ್ಣಯ ಕೈಗೊಂಡಿತ್ತು.

 

 

Leave a Reply

Your email address will not be published.