ವಿಜಯಪುರದಲ್ಲಿ ಶಾಲಾ ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಜಿಲ್ಲೆ

ವಿಜಯಪುರ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶಿಸಿ ದ್ದಾರೆ.‌ ಫೆಬ್ರವರಿ 19ರ ವರೆಗಿದ್ದ ನಿಷೇಧಾಜ್ಞೆಯನ್ನು ಇಂದಿನಿಂದ ಫೆ. 26 ರ ವರೆಗೆ ವಿಸ್ತರಿಸಲಾಗಿದೆ. ಶಾಲಾ-ಕಾಲೇಜುಗಳ ಆವರಣದ ಸುತ್ತಲು ಪ್ರತಿಬಂಧಕಾಜ್ಞೆ ಇದ್ದು, 200 ಮೀಟರ್ ನಿಷೇಧಿತ ಪ್ರದೇಶದಲ್ಲಿ ಯಾರೂ ಕೂಡಾ ಅನಗತ್ಯವಾಗಿ ಓಡಾಡಬಾರದು ಎಂದು ಸಾರ್ವಜನಿಕರಿಗೆ ಸೂಚಿಸಲಾಗಿದೆ.ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಹಾಗು ಪೊಲೀಸರನ್ನು ಹೊರತುಪಡಿಸಿ ಉಳಿದವರಿಗೆ ಶಾಲಾ-ಕಾಲೇಜು​ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.‌ ಸಂಘಟನಾಕಾರರು, ಸಾರ್ವಜನಿಕರು ಪ್ರತಿಭಟನೆ ಅಥವಾ ಮೆರವಣಿಗೆ ಮಾಡಲು ಪ್ರಯತ್ನಿಸಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Leave a Reply

Your email address will not be published.