
ಭಾರತದಲ್ಲಿ ಹಿಜಾಬ್ ಧರಿಸುವುದಕ್ಕೆ ಯಾವುದೇ ನಿಷೇಧವಿಲ್ಲ : ಮುಖ್ತಾರ್ ಅಬ್ಬಾಸ್ ನಖ್ವಿ
ದೆಹಲಿ: ಕರ್ನಾಟಕದಲ್ಲಿ ಹಿಜಾಬ್ ವಿವಾದದ ಕುರಿತು ಮಾತನಾಡಿದ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ದೇಶದಲ್ಲಿ ಸ್ಕಾರ್ಫ್, ಹಿಜಾಬ್ ಧರಿಸಲು ಯಾವುದೇ ನಿಷೇಧವಿಲ್ಲ, ಸಾಂವಿಧಾನಿಕ ಹಕ್ಕುಗಳು ಮತ್ತು ಕರ್ತವ್ಯಗಳು ಸಮಾನವಾಗಿವೆ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ನಖ್ವಿ ” ಹಿಜಾಬ್ ವಿಷಯ ನ್ಯಾಯಾಲಯದಲ್ಲಿದೆ. ಭಾರತದಲ್ಲಿ ಹಿಜಾಬ್ ಧರಿಸುವುದಕ್ಕೆ ಯಾವುದೇ ನಿಷೇಧವಿಲ್ಲ, ಇದು ಸ್ಪಷ್ಟವಾಗಿದೆ. ಸಹಜವಾಗಿ, ಕೆಲವು ಸಂಸ್ಥೆಗಳು ಡ್ರೆಸ್ ಕೋಡ್ ಅಥವಾ ಸಮವಸ್ತ್ರ ಎಂಬ ತಮ್ಮದೇ ಆದ ಶಿಸ್ತು ಹೊಂದಿವೆ. ನಾವು ಸಂವಿ