
ಪಬ್ ಹೌಸ್ ಮೇಲೆ ತಡರಾತ್ರಿ ಸಿಸಿಬಿ ದಾಳಿ: 45 ಯುವಕರು, 19 ಯುವತಿಯರು CCB ಬಲೆಗೆ
ಬೆಂಗಳೂರು: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಪಬ್ ಹೌಸ್ ಮೇಲೆ ತಡರಾತ್ರಿ ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಪಾರ್ಟಿಯಲ್ಲಿ ಡ್ರಗ್ಸ್ ಆಯೋಜನೆ ಮಾಡಿರುವ ಶಂಕೆ ಮೇಲೆ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ದಾಳಿ ನಡೆದಿದ್ದು, 60 ಕ್ಕೂ ಹೆಚ್ಚು ಜನರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪಾರ್ಟಿಯಲ್ಲಿ ವಿದೇಶಿ ಯುವಕ ಯುವತಿಯರು ಭಾಗಿಯಾಗಿದ್ದು, 45 ಯುವಕರು 19 ಯುವತಿರನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ವರೆಗೆ ಪಾರ್ಟಿ ಆಯೋಜನೆ ಮಾಡಿದ್ದ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು, ಸುಮಾರು 60 ಕ್ಕೂ ಜನರನ್ನು ಪಡೆದು ತನಿಖೆ ಮುಂದುವರಿಸಿದ್ದಾರೆ. ಇನ್ನೂ ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.