. ರಾಜ್ಯಾದಂತ ಆಕ್ರೋಶ: ನಡುರಾತ್ರಿ ಬದಲಾಯ್ತು ಸಿಎಂ ಬೊಮ್ಮಾಯಿ ನಿಲುವು

ಬೆಂಗಳೂರು

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಜನಸಮಾವೇಶವನ್ನು ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರಿ ಮೂರು ವರ್ಷಗಳು ತುಂಬಿರುವ ನಡುವಲ್ಲೇ ಬಿಜೆಪಿ ಕಾರ್ಯಕರ್ತ ಪ್ರವೀಣ್ ಅವರ ಹತ್ಯೆ ಸರ್ಕಾರಕ್ಕೆ ಆಘಾತ ನೀಡಿತ್ತು. ಅಲ್ಲದೆ, ಸರ್ಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದ ರಾಜ್ಯ ಬಿಜೆಪಿ ಸರ್ಕಾರ, ಇಂದು ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ಕೂಡ ರದ್ದುಗೊಳಿಸಿದೆ.

ಈ ಬಗ್ಗೆ ಮಧ್ಯರಾತ್ರಿ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರವೀಣ್ ಅವರ ಹತ್ಯೆ ಸಂದರ್ಭದಲ್ಲಿ ಕಾರ್ಯಕ್ರಮ ಸೂಕ್ತವಲ್ಲ. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ಹಾಗೂ ವಿಧಾನಸೌಧದಲ್ಲಿ‌ ಹಮ್ಮಿಕೊಳ್ಳಲಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದರು. ಹತ್ಯೆ ನಡುವೆ ಕಾರ್ಯಕ್ರಮ ನಡೆಸಿದರೆ ಕಾರ್ಯಕರ್ತರ ಕೆಂಗಣ್ಣಿಗೆ ಮತ್ತಷ್ಟು ಗುರಿಯಾಗಬೇಕಾಗುತ್ತದೆ ಎಂಬ ಭಯ ರಾಜ್ಯ ಬಿಜೆಪಿ ನಾಯಕರಲ್ಲಿ ಹುಟ್ಟಿಕೊಂಡಿದೆ. ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಗಲಾಟೆ ಗದ್ದಲವೆಬ್ಬಿಸುವ ಆತಂಕವಿತ್ತು. ಇದೇ ಕಾರಣಕ್ಕೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯಿಂದ ತಿಳಿದುಬಂದಿದೆ.

 

Leave a Reply

Your email address will not be published.