ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕಂದಾಯ ಸಚಿವ ಆರ್ ಅಶೋಕ್

ಜಿಲ್ಲೆ

ಚಾಮರಾಜನಗರ :ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದಾಸನಪುರ ಗ್ರಾಮಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್.ಅಶೋಕ್  ಅನಾವೃಸ್ಟಿಯಿಂದ ಹಾನಿಗೊಳಗಾದ ಪ್ರದೇಶಗಳನ್ನು‌ ಪರಿಶೀಲಿಸಿದರು. ಸತತ ಮಳೆಯಿಂದಾಗಿ ಕಬಿನಿ ಜಲಾಶಯ ದಿಂದ ನದಿಗೆ ಹೆಚ್ಚುವರಿ ನೀರು ಬಿಟ್ಟಿರುವ ಕಾರಣ  ನದಿ ಪಾತ್ರದ ಗ್ರಾಮಗಳ ಕೃಷಿ ಜಮೀನುಗಳಿಗೆ ನದಿ ನೀರು ನುಗ್ಗಿ ಬೆಳೆ ಹಾನಿಯಾಗಿ ರುವುದರಿಂದ ಕಂದಾಯ ಸಚಿವ ಆರ್.ಅಶೋಕ್ ಭೇಟಿ ಪರಿಶೀಲಿಸಿದರು.

ಪ್ರವಾಹ ಪೀಡಿತ ಪ್ರದೇಶವಾದ ದಾಸನಪುರ ಗ್ರಾಮದ ಸುತ್ತಾ  ಭೇಟಿ ನೀಡಿದ ಕಂದಾಯ ಸಚಿವರು ಪ್ರವಾಹದಿಂದ  ಹಾನಿಗೊಳಗಾಗಿ ರುವ ಕೃಷಿ ಜಮೀನುಗಳ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ನದಿ‌ಪಾತ್ರದ ಗ್ರಾಮಗಳನ್ನು ಸುರಕ್ಚಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.ಈ ವೇಳೆ ಸ್ಥಳೀಯ ಶಾಸಕ‌ ಎನ್.ಮಹೇಶ , ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಇದ್ದರು.

Leave a Reply

Your email address will not be published.