
ಉಕ್ರೇನ್ ನಲ್ಲಿ ರಷ್ಯಾ ದಾಳಿ ಮುಂದುವರೆದಿರುವ ಕಾರಣ ನವೀನ್ ಮೃತದೇಹ ಪತ್ತೆಗೆ ಅಡ್ಡಿ: ಸಿಎಂ ಬಸವರಾಜ್ ಬೊಮ್ಮಾಯಿ
ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ ದಾಳಿ ಮುಂದುವರೆದಿರುವ ಕಾರಣ ನವೀನ್ ಮೃತದೇಹ ಪತ್ತೆಗೆ ಅಡ್ಡಿಯಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಆರ್ ಟಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ಮೃತ ದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದರು. ಇನ್ನೂ ಯೂಕ್ರೇನ್ನಿಂದ ಹಲವಾ ರು ಕನ್ನಡಿಗರನ್ನು ಕರೆತರಲಾಗಿದೆ. ಖಾರ್ಕೀವ್, ಕೀವ್ ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯನಿರತರಾಗಿದ್ದಾರೆ.
ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಯೂಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ. ಇನ್ನೂ ಶಿಕಾರಿಪುರದಲ್ಲಿ ರೈತರ ಸಭೆಯಲ್ಲಿ ಪಾಲ್ಗೊಂಡು, ರಾಣಿಬೆನ್ನೂರಿನಲ್ಲಿ ಯೂಕ್ರೇನ್ನಲ್ಲಿ ಮೃತಪಟ್ಟ ನವೀನ್ ಅವರ ತಂದೆಯವರನ್ನು ಭೇಟಿಯಾಗಲಿದ್ದೇನೆ. ಸರ್ಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧರಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.