ರಾಷ್ಟ್ರ ಧ್ವಜದ ಮೇಲೆ ಕೇಸರಿ ಧ್ವಜ ಹಾರಟ..! ಸಚಿವ ಬಿ.ಸಿ.ನಾಗೇಶ್ ವಿರುದ್ಧ ದೂರು ದಾಖಲು

ಜಿಲ್ಲೆ

ತುಮಕೂರು : ಸಚಿವ ಬಿ.ಸಿ.ನಾಗೇಶ್ ಅವರು  ತ್ರಿವರ್ಣ ಧ್ವಜಕ್ಕಿಂತ ಮೇಲೆ ಕೇಸರಿ‌ ಧ್ವಜ ಹಿಡಿದು  ಮೆರವಣಿಗೆಯಲ್ಲಿ ಸಾಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಚಿವರ ಈ ನಡೆ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು  ತಿಪಟೂರು ಪೊಲೀಸ್ ಠಾಣೆಯಲ್ಲಿ‌ ದೂರು ನೀಡಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ 180 ಅಡಿ ಉದ್ದದ ತಿರಂಗ ಯಾತ್ರೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಪಾಲ್ಗೊಂಡಿದ್ದರು.

ಈ  ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಮೇಲೆ ಕೇಸರಿ ಧ್ವಜವನ್ನು ಹಿಡಿದು ಸಚಿವ ನಾಗೇಶ್ ಮೆರವಣಿಗೆ ಎದುರು ಸಾಗಿದ್ದರು.  ‘ಇದು ರಾಷ್ಟ್ರದ್ರೋಹಕ್ಕೆ ಸಮಾನಾದ ಅಪರಾಧವಾಗಿದೆ. ಶಾಲಾ ಮಕ್ಕಳನ್ನು ಇಂತಹ ದೇಶವಿರೋಧಿ ಚಟುವಟಿಕೆಗಳಿಗೆ ಬಳಸಿಕೊಂಡಿರು ವುದು ದುರ್ದೈವದ ಸಂಗತಿಯಾಗಿದೆ. ಹಾಗಾಗಿ ಈ ಬಗ್ಗೆ ಸೂಕ್ತ ತನಿಖೆ‌ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಯುವ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ಅಂದಹಾಗೆ ಸಚಿವರ ನಡೆಗೆ ಸೋಶಿಯಲ್ ಮೀಡಿಯಾದಲ್ಲೂ ಕೂಡ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

Leave a Reply

Your email address will not be published.