ಸಾಯಿಬಾಬಾ ಮಂದಿರದಲ್ಲಿ ನಡೆದ ಗುರುಪೂರ್ಣಿಮೆ: ಕಾರ್ಯಕ್ರಮದಲ್ಲಿ ಶಾಸಕ ಟಿಎ ಶರವಣ ಭಾಗಿ

ಬೆಂಗಳೂರು

ಬೆಂಗಳೂರಿನ ಜೆಪಿ ನಗರದ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಭಾಗಿಯಾಗಿ ಮಾತನಾಡಿದರು. ಸಾಯಿ ಬಾಬಾ ಮಂದಿರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗುರುಪೂರ್ಣಿಮೆಯನ್ನು ವೈಭವದಿಂದ ಆಚರಣೆ ಮಾಡಲಾಗುತ್ತಿದೆ.

 

ಪ್ರತೀ ಗುರುವಾರ ಬಾಬ ಮಂದಿರದಲ್ಲಿ ಸಾವಿರಾರು ಭಕ್ತರು ದರ್ಶನಕ್ಕೆ ಧಾವಿಸುತ್ತಾರೆ. ಆಷಾಢ ಮಾಸದಲ್ಲಿ ನಡೆಯುವ ಗುರುಪೂರ್ಣಿಮೆಯು ದಿನವನ್ನು ಅಚ್ಚುಕಟ್ಟಾಗಿ ಆಚರಿಸಲಾಗಿದೆ. ಸಾಯಿಬಾಬಾ ನಂಬಿದ ಎಲ್ಲರಿಗೂ ಒಳಿತು ಮಾಡಲಿ ಎಂದು ಟಿಎ ಶರವಣ ಅವರು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಹಲವು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published.