SDPI, PFI ಸಂಘಟನೆಯವರು ಕಂಡರೆ ನುಗ್ಗಿ ಹೊಡೆಯುತ್ತೇವೆ: ಕುಲಕರ್ಣಿ

ಜಿಲ್ಲೆ

ಧಾರವಾಡ: ದೇಶದಲ್ಲಿ ಎಸ್‌ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳು ಅಶಾಂತಿ ಸೃಷ್ಠಿಸುವುದರ ಜೊತೆಗೆ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿವೆ. ಈ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಎರಡೂ ಸಂಘಟನೆಯವರು ಭಾರತವನ್ನು 2047ಕ್ಕೆ  ಇಸ್ಲಾಮೀಕರಣಗೋಳಿಸುವ ಉದ್ದೇಶ ಹೊಂದಿದ್ದಾರೆ. ಕೇರಳ ರಾಜ್ಯದ ಮುಖ್ಯಮಂತ್ರಿ ಪೀಣರಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಅಚ್ಯುತನ್ ಇಬ್ಬರೂ ಪಿಎಫ್ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ಬ್ಯಾನ್ ಮಾಡುವಂತೆ ಕೇಂದ್ರಕ್ಕೆ ಒತ್ತಾಯ ಮಾಡಿದ್ದಾರೆ. ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಈ ಸಂಘಟನೆಗಳನ್ನು ಬ್ಯಾನ್ ಮಾಡುವಂತೆ ಒತ್ತಾಯ ಮಾಡಿತ್ತು. ಈಗ ಇದೇ ಪಕ್ಷ ಅಧಿಕಾರದಲ್ಲಿದ್ದು, ಈ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

Leave a Reply

Your email address will not be published.