Home District ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ

ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ

410
0

ಚಿಕ್ಕೋಡಿ- ಸ್ವಯಂಪ್ರೇರಿತರಾಗಿ ಕೋವಿಡ್ ಲಸಿಕೆ ಪಡೆಯಿರಿ,ಸಚಿವೆ ಶಶಿಕಲಾ ಜೊಲ್ಲೆ ಮನವಿ.

ಚಿಕ್ಕೋಡಿಯ ಸರ್ಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ, ಕೋವಿಡ್-19 ಲಸಿಕೆಯ ಎರಡನೇ ಡೋಸ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಪಡೆದರು. ಬಳಿಕ ಕೊರೊನಾ ವಾರಿಯರ್ಸ್ ಗಳಾಗಿ ಆಸ್ಪತ್ರೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೈದ್ಯರು, ದಾದಿಯರು ಹಾಗೂ ಎಲ್ಲಾ ಸಿಬ್ಬಂದಿ ವರ್ಗಕ್ಕೆ ಧನ್ಯವಾದ ಸಲ್ಲಿಸಿದರು.

ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಕೊರೊನಾ 2ನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಎಲ್ಲರೂ ತಪ್ಪದೇ ಕೋವಿಡ್ ಲಸಿಕೆ ಪಡೆದು ಸುರಕ್ಷಿತರಾಗಿರಿ. ಲಸಿಕೆ ಹಾಕಿಸಿಕೊಳ್ಳುವುದರಿಂದ ಸೋಂಕಿನ ತೀವ್ರತೆ ಕಡಿಮೆ ಮಾಡಲು ಸಾಧ್ಯ. ಯಾರೂ ಭಯ ಪಡುವ ಅಗತ್ಯವಿಲ್ಲ. ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಂಡು, ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ. ವಿಠ್ಠಲ ಶಿಂಧೆ, ಮುಖ್ಯ ವೈದ್ಯಾಧಿಕಾರಿಗಳಾದ ಡಾ. ವಿವೇಕ ಹೊನ್ನಾಳಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ಹಾಜರಿದ್ದರು.

Previous articleಕೊಡಗಿನಲ್ಲಿ ‌ವರುಣನ ಆರ್ಭಟ; ಭೂಮಿಯ ತಾಪಕ್ಕೆ ತಂಪರೆದ ಮಳೆರಾಯ!
Next articleಕೋರೊನಾ ಸೋಂಕಿನಿಂದ ನಿವೃತ್ತ ಸಬ್ ಇನ್ಸ್ ಪೆಕ್ಟರ್ ಶಿವಣ್ಣ (76) ನಿಧನ

LEAVE A REPLY

Please enter your comment!
Please enter your name here