ಶಿಕಾರಿಪುರ ಕ್ಷೇತ್ರವನ್ನು ಪುತ್ರನಿಗಾಗಿ ಬಿಟ್ಟುಕೊಟ್ಟ ಮಾಜಿ ಸಿಎಂ ಯಡಿಯೂರಪ್ಪ

ಜಿಲ್ಲೆ

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಪುತ್ರನಿಗಾಗಿ ತಮ್ಮ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಎಸ್‌ವೈ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಶಿಕಾರಿಪುರದಲ್ಲಿ ನಿಲ್ಲುತ್ತಿಲ್ಲ. ವಿಜಯೇಂದ್ರ ಅವರೇ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುತ್ತಾರೆ.

ಬಹಳ ದೊಡ್ಡ ಅಂತರದಲ್ಲಿ ಅವನನ್ನು ಗೆಲ್ಲಿಸಿಕೊಡಬೇಕು ಅಂತಾ ಶಿಕಾರಿಪುರ ಜನತೆಯಲ್ಲಿ‌ ಕೈಜೋಡಿಸಿ ಪ್ರಾರ್ಥನೆ ಮಾಡುತ್ತಿದ್ದೇನೆ ಎಂದು ಮನವಿ ಮಾಡಿದರು. ಹಳೆ ಮೈಸೂರು ಭಾಗದಲ್ಲಿ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಇದೆ. ಆದರೆ ನಾನು ಕ್ಷೇತ್ರ ಖಾಲಿ ಮಾಡುತ್ತಿರುವುದರಿಂದ ವಿಜಯೇಂದ್ರ ಶಿಕಾರಿಪುರದಲ್ಲಿ ನಿಲ್ಲಲಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published.