Shivamogga Subbanna..ಕನ್ನಡಕ್ಕೆ ಮೊದಲ ರಾಷ್ಟ್ರಪ್ರಶಸ್ತಿ ತಂದುಕೊಟ್ಟಿದ್ದ ಸುಬ್ಬಣ್ಣ..! ಕಿರುಪರಿಚಯ ಇಲ್ಲಿದೆ ನೋಡಿ

ಬೆಂಗಳೂರು

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಾಯಕ ಶಿವಮೊಗ್ಗ ಸುಬ್ಬಣ್ಣ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೃದಯಾಘಾತವಾಗಿ ಶಿವಮೊಗ್ಗ ಸುಬ್ಬಣ್ಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕನ್ನಡ ಸುಗಮ ಸಂಗೀತ ಕ್ಷೇತ್ರದ ಹಿರಿಯ ಗಾಯಕರಾಗಿದ್ದ ಜಿ. ಸುಬ್ರಹ್ಮಣ್ಯ ಅವರ ಕಾಡು ಕುದುರೆ ಓಡಿ ಬಂದಿತ್ತಾ ಹಾಡು ಪ್ರಖ್ಯಾತಿ ಪಡೆದಿತ್ತು. 1979ರಲ್ಲಿ ‘ಕಾಡು ಕುದುರೆ’ ಚಲನಚಿತ್ರಕ್ಕೆ ಕಾಡು ಕುದುರೆ ಓಡಿ ಬಂದಿತ್ತಾ ಹಾಡನ್ನು ಸುಬ್ಬಣ್ಣ ಹಾಡಿದ್ದರು. ಇದೇ ಹಾಡಿಗೆ ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ ರಜತ ಕಮಲ ರಾಷ್ಟ್ರ ಪ್ರಶಸ್ತಿ ಅವರಿಗೆ ಒಲಿದಿತ್ತು.

ಮುಖ್ಯವಾಗಿ ರಜತ ಕಮಲ ರಾಷ್ಟ್ರ ಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡಿಗ ಸುಬ್ಬಣ್ಣರಾಗಿದ್ದರು. 1985ರಲ್ಲಿ ರಾಜ್ಯೋತ್ಸವ ಪುರಸ್ಕಾರ, 1988ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪುರಸ್ಕಾರ, 1999ರಲ್ಲಿ ಸಂತ ಶಿಶುನಾಳ ಷರೀಫ ಪ್ರಶಸ್ತಿ ಲಭಿಸಿದ್ದು, 2008ರಲ್ಲಿ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಸುಬ್ಬಣ್ಣ ಪಡೆದಿದ್ದರು. ಶಿವಮೊಗ್ಗ ಜಿಲ್ಲೆಯ ನಗರ ಎಂಬ ಊರಿನಲ್ಲಿ 1938ರ ಡಿಸೆಂಬರ್ 14 ರಂದು ಜನಿಸಿದ್ದ ಸುಬ್ಬಣ್ಣರವರ ಮೂಲ ಹೆಸರು ಜಿ.ಸುಬ್ರಹ್ಮಣ್ಯ.

ಕಾಡುಕುದುರೆ ಚಿತ್ರದ ಕಾಡುಕುದುರೆ ಓಡಿ ಬಂದಿತ್ತಾ ಹಾಡನನ್ನು ಸುಬ್ಬಣ್ಣ ಅವರು ಹಾಡಿದ್ದರು. ಈ ಹಾರಿಗೆ ಅವರಿಗೆ ರಾಷ್ಟ್ರಪ್ರಶಸ್ತಿ ಬಂದಿತ್ತು. ಆದರೆ ಸುಬ್ಬಣ್ಣ ಅವರಿಗೆ ಬಂದ ಪ್ರಶಸ್ತಿಯನ್ನು ಆಗ ಖ್ಯಾತಿ ಪಡೆದಿದ್ದ ಎಸ್​​ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಬಂದಿದೆ ಎಂದು ವರದಿ ಮಾಡಲಾಗಿತ್ತು. ರೇಡಿಯೋ ಸಿಲೋನ್​ ಕೂಡ ಬಾಲಸುಬ್ರಹ್ಮಣ್ಯಂ ಅವರಿಗೆ ಪ್ರಶಸ್ತಿ ಬಂದಿದೆ ಅಂತ ಹೇಳಿತ್ತು. ಅಲ್ಲದೇ ಅವರನ್ನು ಹಲವು ಕಾರ್ಯಕ್ರಮಗಳಲ್ಲಿ ಬಾಲಸುಬ್ರಹ್ಮಣ್ಯಂ ಎಂದೇ ಕರೆಯುತ್ತಿದ್ದರಂತೆ. ಇದರಿಂದ ಬೇಸತ್ತು ಸ್ವತಃ ವಕೀಲರಾಗಿದ್ದ ಸುಬ್ರಹ್ಮಣ್ಯ ಅವರು ತಮ್ಮ ಹೆಸರನ್ನು ಶಿವಮೊಗ್ಗ ಸುಬ್ಬಣ್ಣ ಅಂತ ಬದಲಿಸಿಕೊಂಡರು.

Leave a Reply

Your email address will not be published.