ಉಪ್ಪಿ-ಕಿಚ್ಚನ ‘ಕಬ್ಜ’ ಚಿತ್ರಕ್ಕೆ ನಾಯಕಿಯಾದ ಶ್ರೀಯಾ ಶರಣ್..! ಫಸ್ಟ್ ಲುಕ್ ರಿಲೀಸ್

ಚಲನಚಿತ್ರ

ರಿಯಲ್ ಸ್ಟಾರ್ ಉಪೇಂದ್ರ, ಕಿಚ್ಚ ಸುದೀಪ್ ಕಾಂಬಿನೇಷನ್‌ ನಲ್ಲಿ ‘ಕಬ್ಜ’ ಸೆಟ್ಟೇರಿರುವುದು ಗೊತ್ತಿರುವ ವಿಚಾರ. ಆದರೆ ಈ ಸಿನಿಮಾದಲ್ಲಿ ನಾಯಕಿ ಸ್ಥಾನ ಅಲಂಕರಿಸೋದು ಯಾರು..? ಎಂಬ ಪ್ರಶ್ನೆಗೆ ಇದೀಗ ಉತ್ತರ ನೀಡಿದೆ ಚಿತ್ರತಂಡ. ನಿರ್ದೇಶಕ ಆರ್.‌ಚಂದ್ರು ಈ ಕುರಿತು ಬಿಗ್‌ ಅಪ್‌ಡೇಟ್‌ ನೀಡಿದ್ದು, ಕಿಚ್ಚ ಸುದೀಪ್‌ ಹಾಗೂ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿಮಾನಿ ಬಳಗಕ್ಕೆ ಬಿಗ್‌ ಗಿಫ್ಟ್‌ ಸಿಕ್ಕಂತಾಗಿದೆ. ಆರ್.ಚಂದ್ರು ನಿರ್ದೇಶನದ ಕಬ್ಜ ಸಿನಿಮಾದಲ್ಲಿ ಶ್ರೀಯಾ ಶರಣ್ ಮಧುಮತಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ಕಬ್ಜ ಸಿನಿಮಾದಲ್ಲಿ ಇಬ್ಬರು ನಾಯಕಿಯರಿದ್ದು, ಇಬ್ಬರೂ ದಕ್ಷಿಣದ ಖ್ಯಾತ ತಾರೆಯರೇ ಇರಲಿದ್ದಾರೆ ಎಂದು ನಿರ್ದೇಶಕ ಚಂದ್ರು ಹೇಳಿ ದ್ದರು. ಆ ಮಾತಿನಂತೆ ಇದೀಗ ಶ್ರೀಯಾ ಶರಣ್ ಅವರನ್ನು ಕರೆತಂದಿದ್ದಾರೆ. ರವಿವಾರ ಶ್ರೀಯಾ ಅವರ ಫೋಟೋ ಶೂಟ್ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದಿದ್ದು, ಇಡೀ ದಿನ ಫೋಟೋಶೂಟ್ನಲ್ಲಿ ಅವರು ಭಾಗಿಯಾಗಿದ್ದರು. ಕಬ್ಜ ಚಿತ್ರದಲ್ಲಿ ಉಪೇಂದ್ರ ಮತ್ತು ಕಿಚ್ಚ ಸುದೀಪ್ ಇಬ್ಬರು ಸ್ಟಾರ್ ನಟರಿದ್ದು ಯಾರ ಜತೆ ಶ್ರೀಯಾ ನಟಿಸಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಇತ್ತು.

 

ಉಪೇಂದ್ರ ಜತೆ ಶ್ರೀಯಾ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಕಿಚ್ಚ ಸುದೀಪ್ ಅವರಿಗೆ ಮತ್ತೋರ್ವ ತಾರೆಯನ್ನು ಹುಡುಕಿದ್ದು, ಸದ್ಯದಲ್ಲೇ ಆ ನಟಿಯ ಹೆಸರನ್ನೂ ಬಹಿರಂಗ ಪಡಿಸುತ್ತೇನೆ ಎಂದಿದ್ದಾರೆ ಚಂದ್ರು. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ನಿರ್ಮಾಣವಾಗುತ್ತಿದೆ. ಅಲ್ಲದೇ ಭಾರೀ ಬಜೆಟ್ ನಲ್ಲೂ ತಯಾರಾಗುತ್ತಿದೆ. ಈಗಾ ಗಲೇ ಯಶಸ್ಸಿ ಸಿನಿಮಾಗಳನ್ನು ನೀಡಿರುವ ಆರ್.ಚಂದ್ರು ಬಗ್ಗೆ ಈ ಸಿನಿಮಾದಿಂದ ಮತ್ತಷ್ಟು ನಿರೀಕ್ಷೆ  ಹೆಚ್ಚಾಗಿದೆ.

Leave a Reply

Your email address will not be published.