ಸಿದ್ದರಾಮೋತ್ಸವ- 75 ಕಾರ್ಯಕ್ರಮಕ್ಕೆ 25 ಸಾವಿರ ಜನ ಭಾಗಿ

ಜಿಲ್ಲೆ

ಜನಪರ ಯೋಜನೆಗಳ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಅಹಿಂದ ವರ್ಗಗಳ ನಾಯಕ ಸಿದ್ದರಾಮಯ್ಯನವರ ಹುಟ್ಟು ಹಬ್ಬವನ್ನು ಪಕ್ಷಾತೀತವಾಗಿ ಆಚರಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಹೇಳಿದರು.

ಕೆ.ಆರ್.ಪುರ ಸಮೀಪದ ಬಾಬುಸಪಾಳ್ಯದಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಡಿಸೆಂಬರ್ 3 ರಂದು ದಾವಣಗೆರೆಯಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಸಿದ್ದರಾಮೋತ್ಸವ- 75 ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಪೂರ್ವ ತಾಲ್ಲೂಕಿನಿಂದ ಇಪ್ಪತ್ತೈದು ಸಾವಿರಕ್ಕೂ ಅಧಿಕ ಜನರು ಸಿದ್ದರಾಮಯ್ಯನವರ ಅಭಿಮಾನಿಗಳು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸಿದ್ದರಾಮಯ್ಯನವರು ಬಡವರ ಬಗ್ಗೆ ವಿಶೇಷವಾದ ಕಾಳಜಿಯನ್ನಿಟ್ಟುಕೊಂಡು ಎಲ್ಲಾ ವರ್ಗಗಳ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅಹಿಂದ ವರ್ಗಗಳಿಗೆ ನೀಡಿರುವ ಕೊಡುಗೆ ಅಪಾರ. ಅಂತವರ ಹುಟ್ಟು ಹಬ್ಬವನ್ನು ದಾವಣಗೆರೆಯಲ್ಲಿ ಪಕ್ಷಾತೀತವಾಗಿ ಆಚರಿಸಲಾಗುತ್ತದೆ. ಎಲ್ಲಾ ವರ್ಗದ ಜನರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳಬೇಕೇಂದು ಮನವಿ ಮಾಡಿದರು.

ಈ ಸಂಧರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ಕೃಷ್ಣಮೂರ್ತಿ, ಕುರುಬರ ಸಂಘದ ನಿರ್ದೇಶಕ ರಾಮಕೃಷ್ಣಪ್ಪ, ಪೂರ್ವ ತಾಲ್ಲೂಕು ಅಧ್ಯಕ್ಷ ಆರ್.ಪ್ರಕಾಶ್, ಮೇಡಹಳ್ಳಿ ರಾಕೇಶ್, ಕಲ್ಕೆರೆ ಮಾದೇಶ್, ಮಧುಸೂದನ್, ಅಂಜಿನಪ್ಪ, ದೊಡ್ಡಗುಬ್ಬಿ ಸುಚೀತ್ರ ಇದ್ದರು.

 

Leave a Reply

Your email address will not be published.