ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕದಲ್ಲಿ ಅಕ್ರಮ: ಕಡಿವಾಣ ಹಾಕಲು ರಾಜ್ಯ ಸರ್ಕಾರದಿಂದ ಹೊಸ ಕ್ರಮ

ಬೆಂಗಳೂರು

ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದರೂ, ರೈತರಿಗೆ ಸರಿಯಾದ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಸಿಗುತ್ತಿಲ್ಲ. ಇದರಿಂದ ರೈತರು ಸಮಯಕ್ಕೆ ಸರಿಯಾಗಿ ಬೆಳೆ ಬೆಳೆಯಲಾಗದೆ ಸಮಸ್ಯೆಗೆ ಸಿಲುಕುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ, ರಾಜ್ಯದಲ್ಲಿ ಹಲವು ವರ್ಷಗಳಿಂದಲೂ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಅಕ್ರಮ ಮಾರಾಟ. ಕೃಷಿ ಇಲಾಖೆ ಜಾಗೃತ ದಳ ಆಗಾಗ ದಾಳಿ ನಡೆಸುತ್ತಲೇ ಇರುತ್ತದೆ. ಆದರೂ ಕಾಳಸಂತೆಯಲ್ಲಿ ಬಿತ್ತನೆ ಬೀಜ,

ಕೀಟನಾಶಕಗಳು ಮಾರಾಟ ಆಗುತ್ತಲೇ ಇವೆ. ಹಾಗಾಗಿ ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಹೊಸ ಕಾನೂನು ರೂಪಿಸುತ್ತಿದೆ. ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರಿಗೆ ಬಿಸಿ ಮುಟ್ಟಿಸಲು ಹೊಸ ಅಸ್ತ್ರ ಅನುಕೂಲವಾಗಲಿದೆ. ಜೊತೆಗೆ ಹೊಸ ಆಯಪ್​ನನ್ನು ರಚಿಸಿ ಅದರ ಮೂಲಕ ಅಕ್ರಮಗಳನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈಗ ಇರುವ ಕಾನೂನಿನಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಮುಂದಿನ ಅಧಿವೇಶನದಲ್ಲಿ ಪ್ರತ್ಯೇಕ ಕಾನೂನು ತರಲು ಕೃಷಿ ಸಚಿವ ಬಿ ಸಿ ಪಾಟೀಲ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

Leave a Reply

Your email address will not be published.