ಏಕಬಳಕೆ ಪ್ಲಾಸ್ಟಿಕ್​ ನಿಷೇಧ: ಬೆಂಗಳೂರಿನಲ್ಲಿ 2 ಟನ್ ನಿಷೇಧಿತ ಪ್ಲಾಸ್ಟಿಕ್ ಜಪ್ತಿ

ಬೆಂಗಳೂರು

ಬೆಂಗಳೂರು: ಏಕಬಳಕೆ ಪ್ಲಾಸ್ಟಿಕ್​ ನಿಷೇಧ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 1ರಿಂದ ಇದುವರೆಗೆ 1,319 ಸ್ಥಳಗಳಲ್ಲಿ ಅನಿರೀಕ್ಷಿತ ದಾಳಿ ಮಾಡಲಾಗಿದೆ. ಸುಮಾರು ಎರಡು ಟನ್​ನಷ್ಟು​​ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ಜಪ್ತಿ ಮಾಡಿ 8 ಲಕ್ಷ ರೂ.ಗೂ ಅಧಿಕ ದಂಡ ವಸೂಲಿ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಕೆ ಬದಲು ಪುನರ್ ಬಳಕೆ ಮಾಡಬಹುದಾದ ಬಟ್ಟೆ ಬ್ಯಾಗ್, ನಾರಿನ ಬ್ಯಾಗ್, ಪೇಪರ್​ನಿಂದ ತಯಾರಿಸಿದ ಕವರ್ ಬಳಸಬೇಕು.

ಏಕಬಳಕೆ ಪ್ಲಾಸ್ಟಿಕ್​ ನಿಷೇಧ ಹಿನ್ನೆಲೆಯಲ್ಲಿ ಜುಲೈ 1ರಿಂದ ಜುಲೈ 13ರವರೆಗೆ 1,319 ಸ್ಥಳಗಳಲ್ಲಿ ಅನಿರೀಕ್ಷಿತ ದಾಳಿ ನಡೆಸಲಾಗಿದ್ದು, ಒಟ್ಟು 1,926.8 ಕೆಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ಜಪ್ತಿ ಮಾಡಿ 8,36,300 ರೂ. ದಂಡವನ್ನು ವಿಧಿಸಲಾಗಿದೆ ಎಂದು ಪಾಲಿಕೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

 

Leave a Reply

Your email address will not be published.