ಸೋಲೇ ಗೆಲುವಿನ ಮೆಟ್ಟಿಲು: ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ನ್ಯಾಮಗೌಡ

ಜಿಲ್ಲೆ

ಬಾಗಲಕೋಟೆ :ವಿದ್ಯಾರ್ಥಿಗಳಿಗೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಜೊತೆಗೆ ಕ್ರೀಡೆ ಕೂಡ ಬಹಳ ಮುಖ್ಯ. ಕ್ರೀಡೆಯಿಂದ ಮನಸ್ಸು ದೇಹ ಎರಡೂ ಅರಳುತ್ತವೆ. ಕ್ರೀಡಾ ಸ್ಫೂರ್ತಿಯಿಂದ ತಮ್ಮಲ್ಲಿರುವ ಸಾಮರ್ಥ್ಯವನ್ನು ಒರೆಗೆ ಹಚ್ಚಿ ಎಲ್ಲ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಸಮಾಜಕ್ಕೆ ತೋರಿಸಬೇಕು. ಸೋಲೇ ಗೆಲುವಿನ ಮೆಟ್ಟಿಲು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ನ್ಯಾಮಗೌಡ ಹೇಳಿದರು. ಗ್ರಾಮೀಣ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳರಿಮೆಯನ್ನು ದೂರಮಾಡಿ ನಿರಂತರ ಪ್ರಯತ್ನ ಮಾಡುವುದರಿಂದ ವಿದ್ಯಾರ್ಥಿಗಳು ಕೂಡ ಅತ್ಯುತ್ತಮ ಸಾಧನೆ ಮಾಡಬಹುದು ಎಂದು ಹೇಳಿದರು.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಾಮಪೂರ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಲಯಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಆಟಗಾರರು ಕ್ರೀಡೆಯ ಬಗ್ಗೆ ನಕಾರಾತ್ಮಕ ಭಾವನೆ ತೋರದೆ ಛಲದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ನಮ್ಮ ಎಲ್ಲ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಆ ಮೂಲಕ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ತೋರಿಸಬೇಕು ಎಂದು ಹೇಳಿದರು.

ಕ್ರೀಡಾಕೂಟವನ್ನು ಅತ್ಯುತ್ತಮವಾಗಿ ಆಯೋಜಿಸಲಾಗಿದೆ. ಕೋವಿಡ್ ಅವಧಿಯಲ್ಲಿ ಮಕ್ಕಳ ಮನಸ್ಸು ಜಿಡ್ಡುಗಟ್ಟಿತ್ತು .ಮತ್ತೆ ಈ ವರ್ಷ ಕ್ರೀಡಾಕೂಟಗಳು ಉತ್ತಮವಾಗಿ ನಡೆದಿದ್ದು ಎಲ್ಲ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಬೇಕು ಎಂದು ಕರೆ ಕೊಟ್ಟರು. ನಾಯಕತ್ವ ಗುಣ ಹಾಗೂ ಪರಸ್ಪರ ಸೌಹಾರ್ದ ಬೆಳೆಸುವಲ್ಲಿ ಆಟಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಸೋಲೇ ಗೆಲುವಿನ ಸೋಪಾನ. ಕ್ರೀಡಾಪಟುಗಳು ಸೋಲು ಹಾಗೂ ಗೆಲುವು ಎರಡನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಿ ಕ್ರೀಡಾಸ್ಫೂರ್ತಿ ಮೆರೆಯಬೇಕು ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಿಗೆ ನ್ಯಾಯ ಸಮ್ಮತವಾದ ಆಟ ಆಟವನ್ನು ಆಡಿಸಿ ಎಲ್ಲ ಮಕ್ಕಳಿಗೆ ಪ್ರೋತ್ಸಾ ನೀಡಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ಶ್ರೀಶೈಲ ಬುರ್ಲಿ. ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಚೇರ್ಮನ್ನರು ಸಿದ್ದಪ್ಪ ಮೇಣಿ. ವಾಯ್ಸ್ ಚೇರ್ಮನ್ನರು ರಾಮದಾಸ ಸಿಂಘನ್. ಕಾರ್ಯದರ್ಶಿ ಶಕೀಲ ನದಾಫ. ಸಂಸ್ಥೆಯ ಅಧ್ಯಕ್ಷರು ಶ್ರೀಮತಿ ಡಿ ಎಂ ನದಾಫ ಸೇರಿದಂತೆ ಒಲೆಯ ಮಟ್ಟದ ವಿವಿಧ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಶಿಕ್ಷಕರು ಪಾಲ್ಗೊಂಡಿದ್ದರು.

Leave a Reply

Your email address will not be published.