ಒಂಟಿಯಾಗಿ ಹೋಗುತ್ತಿದ್ದವರೇ ಇವರ ಟಾರ್ಗೆಟ್: ಖತರ್ನಾಕ್ ಗ್ಯಾಂಗ್ ಅರೆಸ್ಟ್

ಅಪರಾಧ ಬೆಂಗಳೂರು

ಬೆಂಗಳೂರು: ಬೆಂಗಳೂರಿನಲ್ಲಿ ರಾಬರಿ ಮಾಡುತ್ತಿದ್ದ ಖತಾರ್ನಾಕ್ ತಂಡವೊಂದನ್ನು ಕಬ್ಬನ್ ಪಾರ್ಕ್ ಠಾಣಾ ಪೊಲೀಸ್ ಬಂಧಿಸಿದ್ದಾರೆ. ನಗರದ ವಿವಿಧೆಡೆ ಬರೊಬ್ಬರಿ 74 ರಾಬರಿ ನಡೆಸಿದ ಮಹಮ್ಮದ್ ಉಸ್ಮಾನ್, ಮಹಮ್ಮದ್ ಹುಸೇನ್, ತಬ್ರೇಜ್ ಖಾನ್, ಜುನೈದ್ ಮತ್ತು ಇರ್ಫಾನ್ ಪಾಷ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ರಸ್ತೆಗಳಲ್ಲಿ ಒಂಟಿಯಾಗಿ ಓಡಾಡುತ್ತಿದ್ದವನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದ ಆರೋಪಿಗಳು ಮೊಬೈಲ್​ಗಳನ್ನು ಕಸಿದುಕೊಂಡು ಪರಾರಿಯಾಗುತ್ತಿದ್ದರು.

ಕಬ್ಬನ್ ಪಾರ್ಕ್, ಅಶೋಕನಗರ, ಮಾಗಡಿ ರೋಡ್, ಸುದ್ದಗುಂಟೆ ಪಾಳ್ಯ, ಹೈಗ್ರೌಂಡ್ಸ್, ಶ್ರೀರಾಮಪುರ ಸೇರಿದಂತೆ ನಗರದ ಹಲವು ಭಾಗದಲ್ಲಿ ಆರೋಪಿಗಳು ರಾಬರಿ ಮಾಡಿದ್ದರು. ಬೆಂಗಳೂರಿನಲ್ಲಿ ರಾಬರಿ ಮಾಡಿದ ಮೊಬೈಲ್​ಗಳನ್ನು ಹೈದರಾಬಾದ್ ಮತ್ತು ಚೆನ್ನೈನಲ್ಲಿ ಸ್ಪೇರದ ಪಾರ್ಟ್ಸ್ ಆಗಿ ಮಾರಾಟ ಮಾಡಲಾಗುತ್ತಿತ್ತು. ಆರೋಪಿಗಳು ಪ್ರತಿ ಮೊಬೈಲ್​ಗೆ ನಾಲ್ಕು ಸಾವಿರ ರೂಪಾಯಿವರೆಗೆ ಹಣ ಪಡೆದು ಮಾರಾಟ ಮಾಡುತ್ತಿದ್ದರು. ಈ ರಾಬರಿ ಗ್ಯಾಂಗ್​ ಹಿಂದೆ ಓರ್ವ ಕಿಂಗ್​ಪಿನ್ ಇರುವ ಮಾಹಿತಿ ತಿಳಿದುಬಂದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published.