ಶ್ರೀಲಂಕಾ ಅಧ್ಯಕ್ಷ ಗೋಟಬಯ್ ಪಲಾಯನ: ಮನೆಗೆ ನುಗ್ಗಿ ಆಕ್ರೋಶ ಹೊರ ಹಾಕಿದ ಪ್ರತಿಭಟನಾಕಾರರು

ಅಂತರಾಷ್ಟ್ರೀಯ

ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರನ್ನು ಶನಿವಾರ ರಾಜಧಾನಿ ಕೊಲಂಬೊದಲ್ಲಿರುವ ಅವರ ಅಧಿಕೃತ ನಿವಾಸದಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಉನ್ನತ ರಕ್ಷಣಾ ಮೂಲ ತಿಳಿಸಿದೆ. ಗೋಟಬಯ ಅವರ ರಾಜೀನಾಮೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದು ಕಂಪೌಂಡ್ ಗೆ ಆಕ್ರೋಶ ಹೊರ ಹಾಕಿದರು..

“ಅಧ್ಯಕ್ಷರನ್ನು ಸುರಕ್ಷಿತವಾಗಿ ಬೇರೆಡೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ, ಉದ್ರಿಕ್ತ ಪ್ರತಿಭಟನಾಕಾರರು ಅಧ್ಯಕ್ಷರ ನಿವಾಸಕ್ಕೆ ನುಗ್ಗುವ ಸಾಧ್ಯತೆಯನ್ನು ತಡೆಯಲು ಭದ್ರತಾಪಡೆ ಗಾಳಿಯಲ್ಲಿ ಗುಂಡು ಹಾರಿಸಿದೆ. ಈ ಸಂದರ್ಭ 14 ಜನಕ್ಕೆ ಗಾಯಗಳಾಗಿವೆ. ಇಂದು ಸರ್ಕಾರದ ವಿರುದ್ಧ ಕೊಲಂಬೊ ಸೇರಿದಂತೆ ಪಶ್ಚಿಮ ಪ್ರಾಂತ್ಯದಲ್ಲಿ ಯೋಜಿತ ಪ್ರತಿಭಟನೆಗೆ ಮುನ್ನ ದೇಶದ ಏಳು ವಲಯಗಳಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ಶ್ರೀಲಂಕಾ ಪೊಲೀಸರು ತೆಗೆದುಹಾಕಿದ್ದರ ಮಧ್ಯೆ ಈ ಘಟನೆ ನಡೆದಿದೆ. ಸರ್ಕಾರದ ವಿರುದ್ಧ ಉನ್ನತ ವಕೀಲರ ಸಂಘ, ಮಾನವ ಹಕ್ಕುಗಳ ಸಂಘಟನೆ ಮತ್ತು ರಾಜಕೀಯ ಪಕ್ಷಗಳಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗುತ್ತಿದೆ

 

Leave a Reply

Your email address will not be published.