ಕೊವಿಡ್ ಆಸ್ಪತ್ರೆ ಆರಂಭಕ್ಕೆ ಕ್ಷಣಗಣನೆ: ಸಚಿವ ಬಿ. ಶ್ರೀರಾಮುಲು

ಕೊವಿಡ್ ಆಸ್ಪತ್ರೆ ಆರಂಭಕ್ಕೆ ಕ್ಷಣಗಣನೆ: ಸಚಿವ ಬಿ. ಶ್ರೀರಾಮುಲು

422
0

ಸಾವಿರ ಆಕ್ಸಿಜನ್ ಬೆಡ್ ಹೊಂದಿರುವ ತಾತ್ಕಾಲಿಕ ಆಸ್ಪತ್ರೆಯು ಇನ್ನು15 ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು.ಜಿಂದಾಲ್‌ ಎದುರುಗಡೆ ನಿರ್ಮಾಣವಾಗುತ್ತಿರುವ 1ಸಾವಿರ ಆಕ್ಸಿಜನ್ ಹಾಸಿಗೆಗಳ ತಾತ್ಕಾಲಿಕ ಆಸ್ಪತ್ರೆ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
265 ಹಾಸಿಗೆಯುಳ್ಳ ಒಂದು ಘಟಕ ಇನ್ನು ಎರಡು ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ. ಇದರ ಜೊತಗೆ ಇನ್ನು 15 ದಿನಗಳಲ್ಲಿ ಸಂಪೂರ್ಣ ಆಸ್ಪತ್ರೆ ಜನರ ಉಪಯೋಗಕ್ಕೆ ಬರಲಿದೆ.‌

ರಾಜ್ಯದಲ್ಲಿ ಆಕ್ಸಿಜನ್ ಬೆಡ್ ಗಾಗಿ ಜನರು ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಬಳ್ಳಾರಿಯಲ್ಲಿ ನಿರ್ಮಾಣವಾಗುತ್ತಿರುವ ಸಾವಿರಬೆಡ್ ಗಳ ಆಸ್ಪತ್ರೆಯಿಂದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ರಾಯಚೂರು,ಕೊಪ್ಪಳ,ಚಿತ್ರದುರ್ಗ ಜಿಲ್ಲೆಗಳಿಗೂ ಅನುಕೂಲವಾಗಲಿದೆ ಎಂದರು.ಅವಳಿ ಜಿಲ್ಲೆಯ ಜನರು ಬೆಡ್ ಸಿಗುತ್ತಿಲ್ಲ ಎಂದು ಯಾವುದೇ ರೀತಿಯ ಆತಂಕ ಪಡುವ ಅವಶ್ಯಕತೆಯಿಲ್ಲ. ಎಲ್ಲಾ ರೀತಿಯ ಸಮಸ್ಯೆಗಳಿಗೆ ಆಸ್ಪತ್ರೆ ಸಹಾಯವಾಗಲಿದೆ. ಜಿಲ್ಲಾಡಳಿತ ಮತ್ತು ಜಿಂದಾಲ್ ಕಂಪನಿಯ ಈ ಒಂದು ಕಾರ್ಯ ರಾಜ್ಯಕ್ಕೆ ಮಾದರಿಯಾಗಲಿದೆ ಎಂದು ಹೇಳಿದರು.ಮೂಲಭೂತ ಸೌಕರ್ಯ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್‌ಸಿಂಗ್ ಅವರು ಮಾತನಾಡಿ ರಾಜ್ಯದಲ್ಲಿ ಆಕ್ಸಿಜನ್ ಹಾಸಿಗೆಯಿಲ್ಲದೆ ಜನರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಇಂತಹ ಸಮಯದಲ್ಲಿ ಸಾವಿರ ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಾಣ ಮಾಡಲು ಹೊರಟಿರುವ ಜಿಂದಾಲ್ ಕಂಪನಿಗೆ ತುಂಬಾ ಧನ್ಯವಾದಗಳು.

ಜಿಲ್ಲಾಡಳಿತದ ಸಹಕಾರದೊಂದಿಗೆ ಜಿಂದಾಲ್ ಸಂಸ್ಥೆ ಜಿಲ್ಲೆಯ ಜನರ ಕಷ್ಟಕ್ಕೆ ಸ್ಪಂದಿಸುವ ಕೆಲಸಕ್ಕೆ‌ ಮಾಡುವ ಒಂದೊಳ್ಳೆಯ ಕೆಲಸಕ್ಕೆ ಮುಂದಾಗಿದ್ದಾರೆ ಎಂದರು. ಆಕ್ಸಿಜನ್ ನ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಜಿಂದಾಲ್ ಸಂಸ್ಥೆಯ ಸಮೀಪವೇ ಈ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಎಲ್ಲಾ ರೀತಿಯ ಸಂಪೂರ್ಣವಾದ ಸೌಲಭ್ಯಗಳನ್ನು ಹೊಂದಿರುವ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸೇರಿದಂತೆ ಜಿಂದಾಲ್ ನ ಅಧಿಕಾರಿಗಳು ಮತ್ತು ಇತರರು ಇದ್ದರು

VIAಕೊವಿಡ್ ಆಸ್ಪತ್ರೆ ಆರಂಭಕ್ಕೆ ಕ್ಷಣಗಣನೆ: ಸಚಿವ ಬಿ. ಶ್ರೀರಾಮುಲು
SOURCEಕೊವಿಡ್ ಆಸ್ಪತ್ರೆ ಆರಂಭಕ್ಕೆ ಕ್ಷಣಗಣನೆ: ಸಚಿವ ಬಿ. ಶ್ರೀರಾಮುಲು
Previous articleಆಮ್ಲಜನಕ ಪೂರೈಕೆಗೆ ಸಂಬಂಧಿಸಿದ ಕಡತಗಳು ಪೊಲೀಸರಿಂದ ಸೀಜ್!
Next articleಲಾಕ್ ಡೌನ್ ಮಾಡದೇ ಇದ್ದರೇ ಕೊರೋನಾ ಚೈನ್ ಲಿಂಕ್ ತುಂಡರಿಸುವುದು ಕಷ್ಟ; ಸಚಿವ ಎಸ್.ಸುರೇಶ್ ಕುಮಾರ್

LEAVE A REPLY

Please enter your comment!
Please enter your name here