ರಾಜ್ಯ ಸರ್ಕಾರದಿಂದ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ..!

ಬೆಂಗಳೂರು

ಬೆಂಗಳೂರು : ವಸತಿ ಶಾಲೆಯ ವಿದ್ಯಾರ್ಥಿಗಳಗೆ 6 ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ವಸತಿ ಶಾಲೆಯ ವಿದ್ಯಾರ್ಥಿಗಳಗೆ 6 ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರವು ಇನ್ಮುಂದೆ ಎಲ್ಲ ವಸತಿ ಶಾಲೆಗಳಲ್ಲಿ ಆರನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ವಸತಿ ಶಾಲೆ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದಂತಾಗಿದೆ.

Leave a Reply

Your email address will not be published.