ರಾಜ್ಯದ ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು

ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಹಂಚಿಕೆಗೆ 132 ಕೋಟಿ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ. ನಂತರ ವಿತರಣೆಯಾಗಲಿದೆ.

ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು. ಇನ್ನೂ ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಹಿಂದೆ ಕೋವಿಡ್ ಸಮಯದಲ್ಲಿ ಭಿಕ್ಷೆ ಬೇಡಿ ಜನರಿಗೆ ಕೊಡುತ್ತೇವೆ ಎಂದು ಅವರು ಹೇಳಿದ್ದರು. ಆ ಹಣ ಎಲ್ಲಿ ಎಂದು ಕೇಳಿದ ಸಿಎಂ, ಎಂದಿನಂತೆಯೇ ಇದು ಕೂಡ ಎಂದು ತಿಳಿಸಿದರು.

 

Leave a Reply

Your email address will not be published.