ಸ್ಟಂಟ್ ಮಾಡಲು ಹೋಗಿ ಕಾಲು ಮುರಿದುಕೊಂಡ ನಟಿ ಶಿಲ್ಪಾ ಶೆಟ್ಟಿ

ಚಲನಚಿತ್ರ

ಇತ್ತೀಚೆಗೆ ಸ್ಯಾಂಡಲ್ ವುಡ್ ನಟಿ ಸಂಯುಕ್ತಾ ಹೆಗ್ಡೆ ಶೂಟಿಂಗ್ ಸಂದರ್ಭದಲ್ಲಿ ಸ್ಟಂಟ್ ಮಾಡಲು ಹೋಗಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಇದೀಗ ಬಿಟೌನ್ ಬ್ಯೂಟಿ ಶಿಲ್ಪಾ ಶೆಟ್ಟಿ ಕೂಡ ಸ್ಟಂಟ್ ಮಾಡುವ ಸಂದರ್ಭದಲ್ಲಿ ಕಾಲು ಮುರಿದುಕೊಂಡಿದ್ದು, ಸದ್ಯ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಮದುವೆಯಾಗಿ ಎರಡು ಮಕ್ಕಳಿದ್ದರೂ ಶಿಲ್ಪಾ ಶೆಟ್ಟಿಗೆ ಡಿಮ್ಯಾಂಡ್ ಮಾತ್ರ ಕೊಂಚವೂ ಕಮ್ಮಿಯಾಗಿಲ್ಲ. ಮನೆ, ಮಕ್ಕಳ ಜೊತೆ ಸಿನಿ ರಂಗದಲ್ಲೂ ಶಿಲ್ಪಾ ಶೆಟ್ಟಿ ಫುಲ್ ಬ್ಯುಸಿಯಾಗಿದ್ದಾರೆ. ರಿಯಾಲಿಟಿ ಶೋ ಜೊತೆಗೆ ಶಿಲ್ಪಾ ಶೆಟ್ಟಿ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಸದ್ಯ ತಮ್ಮ ಹೊಸ ಪ್ರಾಜೆಕ್ಟ್ `ಇಂಡಿಯನ್ ಪೊಲೀಸ್ ಫೋರ್ಸ್’ ವೆಬ್ ಸಿರೀಸ್‌ನ ಚಿತ್ರೀಕರಣದ ಸಂದರ್ಭದಲ್ಲಿ ಶಿಲ್ಪಾ ಶೆಟ್ಟಿ ಅವರ ಕಾಲಿಗೆ ಪೆಟ್ಟಾಗಿದ್ದು, ಸೂಕ್ತ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ಫೋಟೋ ಸಮೇತಾ ಶಿಲ್ಪಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನಿರ್ದೇಶಕರು ರೋಲ್, ಕ್ಯಾಮೆರಾ, ಆ್ಯಕ್ಷನ್ ಎಂದರು. ನನ್ನ ಕಾಲು ಮುರಿಯಿತು. ಆರು ವಾರ ವಿಶ್ರಾಂತಿ ಪಡೆಯುತ್ತಿದ್ದೇನೆ. ನಂತರ ಮತ್ತೆ ಶೂಟಿಂಗ್‌ಗೆ ಹೋಗುತ್ತೇನೆ ಎಂದು ಶಿಲ್ಪಾ ಶೆಟ್ಟಿ ಅಡಿಬರಹ ನೀಡಿದ್ದಾರೆ. ಒಟ್ನಲ್ಲಿ ನೆಚ್ಚಿನ ನಟಿ ಆದಷ್ಟು ಬೇಗ ಗುಣಮುಖರಾಗಲಿ ಎಂಬುದು ಅಭಿಮಾನಿಗಳ ಆಶಯ.

Leave a Reply

Your email address will not be published.