ಸುಮ್ಮನೆ ವಾಹನ ತಡೆ ಹಿಡಿಯುತ್ತಿದ್ದ HSR ಟ್ರಾಫಿಕ್ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಸಸ್ಪೆಂಡ್..!

ಬೆಂಗಳೂರು

ಬೆಂಗಳೂರು: ಸುಖಾ ಸುಮ್ಮನೆ ದ್ವಿಚಕ್ರ ವಾಹನಗಳನ್ನು ತಡೆಹಿಡಿಯುತ್ತಿದ್ದ ಹೆಚ್.ಎಸ್.ಆರ್ ಟ್ರಾಫಿಕ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್‌ ಅನ್ನು ಅಮಾನತು ಮಾಡಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿ ಬೆಳ್ಳಂದೂರು `eco space’ ಬಳಿ ಸುಖಾ ಸುಮ್ಮನೆ ದ್ವಿಚಕ್ರ ವಾಹನ ತಡೆಯುತ್ತಿದ್ದರು.

ಈ ಕುರಿತು ಸಾರ್ವಜನಿಕರು ಟ್ವೀಟ್ ಮೂಲಕ ಮೂಲಕ ಡಿಜಿಪಿ ಪ್ರವಿಣ್ ಸೂದ್, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತರು ನಗರ ಸಂಚಾರ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹಾಗೂ ಪೂರ್ವ ವಿಭಾಗ ಡಿಸಿಪಿ ಕಲಾ ಕೃಷ್ಣಸ್ವಾಮಿಗೆ ಸೂಚನೆ ನೀಡಿದ್ದರು. ತನಿಖೆ ವೇಳೆ ಕಾನ್ಸ್‌ಟೇಬಲ್‌ ಸುಖಾ ಸುಮ್ಮನೆ ವಾಹನ ತಡೆದಿರುವುದು ಬೆಳಕಿಗೆ ಬಂದಿದೆ

ಅಲ್ಲದೆ ಪೊಲೀಸರು ಕರ್ತವ್ಯ ವೇಳೆ ಬಾಂಡಿ ವೋರ್ನ್ ಕ್ಯಾಮೆರಾ ಆನ್ ಮಾಡಿಕೊಂಡು ಕೆಲಸ ಮಾಡಬೇಕು. ಆದರೆ ಟ್ರಾಫಿಕ್ ಕಾನ್ಸ್‌ಟೇಬಲ್‌ ಬಾಂಡಿ ವೋರ್ನ್ ಕ್ಯಾಮರಾ ರೆರ್ಕಾಡಿಂಗ್‌ನ ಆನ್ ಮಾಡದೇ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಬಗ್ಗೆ ತನಿಖಾ ವರದಿ ನೀಡಿದ ಬಳಿಕ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಅವರು ಕಾನ್ಸ್‌ಟೇಬಲ್‌ ಅಮಾನತು ಮಾಡಿ ಅದೇಶ ಹೊರಡಿಸಿದ್ದಾರೆ..

Leave a Reply

Your email address will not be published.