Home Health ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು: ಸುರೇಶ್ ಕುಮಾರ್

ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು: ಸುರೇಶ್ ಕುಮಾರ್

ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು: ಸುರೇಶ್ ಕುಮಾರ್

303
0

ವರದಿ: ನಾ.ಅಶ್ವಥ್ ಕುಮಾರ್

ಚಾಮರಾಜನಗರ: ಜನತೆಯ ಪ್ರಾಣ ಕಾಪಾಡುವ ಹಿತದೃಷ್ಟಿಯಿಂದ ಲಾಕ್‌ಡೌನ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಜನತೆ ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್‌ಕುಮಾರ್ ಮನವಿ ಮಾಡಿದರು.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕೋವಿಡ್-೧೯ ಸೆಂಟರ್ ಕೇಂದ್ರಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ದಿನೇ ದಿನೇ ಕೋವಿಡ್-೧೯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆಕ್ಸಿಜನ್, ಬೆಡ್ ಇನ್ನಿತರೆ ಸೌಲಭ್ಯಗಳ ಬೇಡಿಕೆ ಹೆಚ್ಚಿದೆ. ಇಂತಹ ಸಂದ್ಗಿದ ಪರಿಸ್ಥಿತಿಯಲ್ಲಿ ಜನರ ಹಿತವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ. ಕೋವಿಡ್‌ನಿಂದ ಮೃತಪಡುತ್ತಿರುವ ಕುಟುಂಬಗಳ ವೇದನೆ, ರೋಧನೆ ಹೇಳತೀರದ್ದಾಗಿದೆ. ಸೋಂಕಿನ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ. ವದಂತಿಗಳಿಗೆ ಕಿವಿಗೊಡದೇ ಕೋವಿಡ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯಬೇಕು. ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಸೋಂಕು ಹರಡುತ್ತಿರುವುದರಿಂದ ಜನತೆ ಹೋಂ ಐಸೋಲೇಷನ್ ಬದಲು ಕೋವಿಡ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯಿರಿ. ಇದರಿಂದ ಮನೆ ಮಂದಿಗೆಲ್ಲಾ ಹಬ್ಬುವುದು ತಪ್ಪುತ್ತದೆ.

ಈಗಾಗಲೇ ಹನೂರು ತಾಲ್ಲೂಕಿನಲ್ಲಿಯೂ ಕೂಡ ಟಾಸ್ಕ್ಪೋರ್ಸ್ ಕಮಿಟಿಯನ್ನು ಶಾಸಕರ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ. ಈ ತಂಡವು ಪ್ರಸ್ತುತ ಕೊರೊನಾ ಸೋಂಕಿನ ಪರಿಣಾಮಗಳ ಬಗ್ಗೆ ನಿಗಾ ವಹಿಸಿ ಸಲಹೆ ಮತ್ತು ಮಾರ್ಗಸೂಚನೆಗಳ ಬಗ್ಗೆ ಗಮನಹರಿಸಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ವಹಿಸಲಿದೆ ಎಂದರು. ಈ ಸಂದರ್ಭದಲ್ಲಿ ಶಾಸಕ ಆರ್.ನರೇಂದ್ರ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹಾಜರಿದ್ದರು.

VIAಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು: ಸುರೇಶ್ ಕುಮಾರ್
SOURCEಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು: ಸುರೇಶ್ ಕುಮಾರ್
Previous articleಔಷಧ ತಯಾರಿಕಾ ಕಂಪನಿ ಜುಬಿಲೆಂಟ್‌ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ
Next articleಕೋಲಾರ ಜಿಲ್ಲೆಗೊಂದು ಹೊಸ ಆಶಾಕಿರಣ; KGFಗೆ 500LPM ಆಕ್ಸಿಜನ್​ ಉತ್ಪಾದನಾ ಯಂತ್ರ

LEAVE A REPLY

Please enter your comment!
Please enter your name here