ಗೂಗಲ್ ಸೀರೆ ಉಟ್ಟು ಫೋಟೋಗೆ ಫೋಸ್ ಕೊಟ್ಟ ರಜನಿ ರಾಘವನ್

ಗೂಗಲ್ ಸೀರೆಯಲ್ಲಿ ಮಿಂಚಿದ ಕನ್ನಡತಿ ರಜನಿ ರಾಘವನ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ರಜನಿ ರಾಘವನ್ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಇತ್ತೀಚೆಗೆ ರಜನಿ ಕಾರ್ಯಕ್ರಮವೊಂದಕ್ಕೆ ತೊಟ್ಟುಕೊಂಡಿದ್ದ ಸೀರೆಯೊಂದು ಅಭಿಮಾನಿಗಳ ಮನ ಗೆದಿದ್ದೆ ಈ ಸೀರೆಯಲ್ಲಿ ರಜನಿ ಫೋಟೋ ಶೂಟ್ ಮಾಡಿಸಿಕೊಂಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ರಜನಿ ರಾಘವನ್ ಗೂಗಲ್ ಎಂದು ಬರೆದಿರುವ ಸೀರೆಯುಟ್ಟು ಗಮನ ಸೆಳೆದಿದ್ದಾರೆ ಕನ್ನಡತಿ ಧಾರವಾಹಿಯ ಮೂಲಕ ಸಾಕಷ್ಟು ಖ್ಯಾತಿ ಘಳಿಸಿರುವ ರಜನಿ ರಾಘವನ್ ಹಿರಿತೆರೆಯಲ್ಲು ಬ್ಯುಸಿಯಾಗಿದ್ದಾರೆ

Continue Reading

ಮಳೆಗಾಲದಲ್ಲೂ ಮುಂದುವರೆದಿದೆ ಕಿರಣ್ ರಾಜ್ ಅವರಿಂದ ಮನಮುಟ್ಟುವ ಕಾರ್ಯ

 “ಬಡ್ಡೀಸ್” ಖ್ಯಾತಿಯ ಕಿರಣ್ ರಾಜ್,   ನಾಯಕನಾಗಿ ಅಷ್ಟೇ ಜನಪ್ರಿಯತೆ ಪಡೆದಿಲ್ಲ. ತಾವು ಮಾಡುವ ಸಾಮಾಜಿಕ ಕಾರ್ಯಗ ಳಿಂದಲ್ಲೂ ಅವರು ಜನಪ್ರಿಯರು. ಕೊರೋನ ಸಂದರ್ಭದಲ್ಲಿ ಇವರು ಮಾಡಿದ ಕಾರ್ಯಗಳನ್ನು ನೆನಪಿಸಿಕೊಳ್ಳುವ ಜನರಿದ್ದಾರೆ. ಕೊರೋನ ಮುಗಿದ ಮೇಲೂ ಕಿರಣ್ ರಾಜ್ ಒಂದಲ್ಲ ಒಂದು ಜನೋಪಕಾರಿ ಕಾರ್ಯ ಮಾಡುತ್ತಿರುತ್ತಾರೆ.    ಜುಲೈ ಆರಂಭವಾದಾಗಿನಿಂದಲೂ‌ ಕರುನಾಡ ಪೂರ್ತಿ ಮಳೆಯ ಅಬ್ಬರ ಜೋರಾಗಿದೆ. ಈ ಮಳೆಯ ಜೊತೆ ಎಷ್ಟೋ ಜನರ ನಿತ್ಯ ಜೀವನ ಸಾಗಬೇಕಿದೆ. ಬೀದಿಬದಿ ವ್ಯಾಪಾರಿಗಳು, ಸಿಗ್ನಲ್ ನಲ್ಲಿ ಮಾರಾಟ ಮಾಡುವವರು ಸಾಕಷ್ಟು […]

Continue Reading

ರಾಕ್ ಸ್ಟಾರ್ ಇಶಾನ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ ‘’ಜೇಮ್ಸ್’’ ಚಿತ್ರದ ಸಾರಥಿ

ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ನಂತಹ ಮಾಸ್ ಕಮರ್ಷಿಯಲ್ ಸಿನಿಮಾಗಳನ್ನು ಸಿನಿಪ್ರಿಯರಿಗೆ ಉಣಬಡಿಸಿರುವ ಡೈರೆಕ್ಟರ್ ಕಂ ಲಿರಿಕ್ಸ್ ರೈಟರ್, ಡೈಲಾಗ್ ರೈಟರ್ ಚೇತನ್ ಕುಮಾರ್ ಹೊಸ ಸಿನಿಮಾ ಅನೌನ್ಸ್ ಆಗಿದೆ. ಅಪ್ಪು ನಟನೆಯ ಕೊನೆಯ ಸಿನಿಮಾ ಜೇಮ್ಸ್ ಬಳಿಕ ಚೇತನ್ ಮುಂದಿನ ಹೆಜ್ಜೆ ಬಗ್ಗೆ ಸಿನಿಲೋಕದಲ್ಲಿ ಕುತೂಹವಿತ್ತು. ಚೇತನ್ ಯಾವ್ ಹೀರೋಗೆ ಆಕ್ಷನ್ ಕಟ್ ಹೇಳ್ತಾರೆ ಎಂಬ ಪ್ರಶ್ನೆಗೀಗ ಉತ್ತರ ಸಿಕ್ಕಿದೆ.  ಪುರಿ ಜಗನ್ನಾಥ್ ಸಾರಥ್ಯದಲ್ಲಿ ಕನ್ನಡ ಮತ್ತು ತೆಲುಗು ಎರಡು ಭಾಷೆಯಲ್ಲಿ ಮೂಡಿ ಬಂದಿದ್ದ ರೋಗ್ […]

Continue Reading

‘ಏಜೆಂಟ್’ ಟೀಸರ್ ಔಟ್…ಹೊಸ ಅವತಾರದಲ್ಲಿ ಅಖಿಲ್ ಅಕ್ಕಿನೇನಿ..”ಏಜೆಂಟ್” ಗೆ ಸಾಥ್ ಕೊಟ್ಟ ಕಿಚ್ಚ ಸುದೀಪ್ ಹಾಗೂ ಶಿವ ಕಾರ್ತಿಕೇಯನ್

ಟಾಲಿವುಡ್ ಚಿತ್ರರಂಗದ ಭರವಸೆ ನಾಯಕ ನಟ ಅಖಿಲ್ ಅಕ್ಕಿನೇನಿ ನಟನೆಯ ಮೋಸ್ಟ್ ಅವೇಟೇಡ್  ಏಜೆಂಟ್ ಸಿನಿಮಾದ ಟೀಸರ್ ರಿವೀಲ್ ಆಗಿದ್ದು, ಯೂಟ್ಯೂಬ್ ನಲ್ಲಿ ಸೆನ್ಸೇಷನಲ್ ಸೃಷ್ಟಿಸ್ತಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಶಿವ ಕಾರ್ತಿಕೇಯನ್ ಟೀಸರ್ ಝಲಕ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ. ಸಿಕ್ಸ್ ಪ್ಯಾಕ್ ಅವತಾರದಲ್ಲಿ ಸಖತ್ ಸ್ಟೈಲೀಶ್ ಲುಕ್ ನಲ್ಲಿ ಅಖಿಲ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ಭರ್ಜರಿ ಆಕ್ಷನ್ ಧಮಾಕಾ ಟೀಸರ್ ನಲ್ಲಿದೆ. ಮಮ್ಮುಟ್ಟಿ ಅಮೋಘ ಅಭಿನಯ ನೋಡುಗರಿಗೆ ಥ್ರಿಲ್ ಕೊಡುತ್ತದೆ. ಹೈ ಬಜೆಟ್‌ನಲ್ಲಿ […]

Continue Reading

ಕನ್ನಡದಲ್ಲೂ ಬರ್ತಿದೆ ರಾಮ್ ಗೋಪಾಲ್ ವರ್ಮಾ ಸಿನಿಮಾ: ಬೆಂಗಳೂರಿನಲ್ಲಿ ‘’ಹುಡುಗಿ’’ ಚಿತ್ರದ ಪ್ರಚಾರ ಮಾಡಿದ RGV

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಸಿನಿಮಾಗಳು ಅಂದರೆ ವಿಭಿನ್ನವಾಗಿಯೇ ಇರುತ್ತದೆ. ಸದಾ ಡಿಫರೆಂಟ್ ಶೈಲಿಯೇ ಚಿತ್ರ‌ ಮಾಡುವುದರಲ್ಲಿ ಸದಾ ಮುಂದೆ. ಹೊಸತನದ ಹೆಜ್ಜೆಗಳನ್ನು ಇಡುವ ಆರ್ ಜಿವಿ ಈಗ ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದು, ಆ ಚಿತ್ರ‌ ಹುಡುಗಿ ಎಂಬ ಶೀರ್ಷಿಕೆಯಡಿ ಕನ್ನಡದಲ್ಲೂ ರಿಲೀಸ್ ಮಾಡಲಾಗ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರ್ತಿದ್ದು, ಈ ಹಿನ್ನೆಲೆ ರಾಮ್ ಗೋಪಾಲ್ ಬೆಂಗಳೂರಿನಲ್ಲಿ ಸಿನಿಮಾ ಪ್ರಚಾರ ನಡೆಸಿದರು. ಮಾಧ್ಯಮಗಳೊಟ್ಟಿಗೆ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ರಾಮ್ ಗೋಪಾಲ್ […]

Continue Reading

ಗುರು ವಂದಾನಾ ಕಾರ್ಯಕ್ರಮ: ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಯಿತು ಗುರು ಶಿಷ್ಯರ ಸಮ್ಮಿಲನ

ಪ್ರತಿಯೊಬ್ಬ ವ್ಯಕ್ತಿ ಸಾಧನೆಯ ಹಿಂದೆ ಗುರುವಿನ ಪಾತ್ರವಿದು ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿ ಶಿಕ್ಷಕರು ಇರುತ್ತಾರೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಎನ್. ಎಂ. ಸಾಲಿ ಹೇಳಿದರು. ಕುನ್ನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಅವರು ಗುರು ಎಂಬ ಪದವನ್ನು ಅರ್ಥೈಸಲು ಸಾಧ್ಯವಿಲ್ಲ . ಪ್ರತಿಯೊಬ್ಬರ ಜೀವನದಲ್ಲಿ ಗುರುವಿನ ಪಾತ್ರ ಮುಖ್ಯವಾಗಿರುತ್ತದೆ. ಗುರು ಹಾಗೂ ವಿದ್ಯಾರ್ಥಿಗಳ ಮಧ್ಯ ಭಾವನಾತ್ಮಕ ಸಂಬಂಧವಿದ್ದು ಅವರ ಏಳಿಗೆಯ ಬಗ್ಗೆ ಮೊದಲು ಹೆಮ್ಮೆ […]

Continue Reading

ರಾಜ್ಯಸಭಾ ಚುನಾವಣೆ ಫಲಿತಾಂಶ: ಬೇಸರ ಹೊರ ಹಾಕಿದ ಡಿಕೆಶಿ

ಬೆಂಗಳೂರು: ನನಗೆ ಜಾತ್ಯಾತೀತ ಶಕ್ತಿಗಳೆಲ್ಲಾ ಒಂದಾಗುತ್ತದೆ ಎನ್ನುವ ವಿಶ್ವಾಸವಿತ್ತು. ಜೆಡಿಎಸ್ ನವರು ನಮಗೆ ಬೆಂಬಲ ಕೊಡಬಹುದು ಎಂಬ ನಿರೀಕ್ಷೆಯಲ್ಲಿದ್ದೆವು. ಅದೇ ರೀತಿ ನಾವು ಅವರಿಗೆ ಬೆಂಬಲ ಕೊಡಬಹುದು ಎನ್ನುವ ನಿರೀಕ್ಷೆಯಲ್ಲಿ ಅವರಿದ್ದರು. ಆದರೆ ಅದು ಆಗಲಿಲ್ಲ ಎಂದು ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು. ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೂರು ಸ್ಥಾನ ಹಾಗೂ ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ. ಆ ಮೂಲಕ, ಜೆಡಿಎಸ್-ಕಾಂಗ್ರೆಸ್ಸಿನ ಜಿದ್ದಿನ ಲಾಭವನ್ನು ಬಿಜೆಪಿ ಪಡೆದುಕೊಂಡಿದ್ದು ಈ ಕುರಿತಾಗಿ ಡಿಕೆಶಿ […]

Continue Reading

ವೈದ್ಯರ ಸಲಹೆ ಮೇರೆಗೆ ಒಂದು ವಾರ ವಿಶ್ರಾಂತಿ ಪಡೆಯುತ್ತಿದ್ದೇನೆ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ವೈದ್ಯರ ಸಲಹೆ ಮೇರೆಗೆ ಒಂದು ವಾರ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಒಂದು ವಾರ ವಿಶ್ರಾಂತಿ ಪಡೆಯುತ್ತಿದ್ದೇನೆ. ಈ ಸಂದರ್ಭದಲ್ಲಿ ನಾನು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ಹೀಗಾಗಿ ಬಿಡದಿ ತೋಟಕ್ಕೆ ಅಥವಾ ಪಕ್ಷದ ಕಚೇರಿಗೆ ನನ್ನ ಭೇಟಿಗೆ ಯಾರೂ ಬರಬೇಡಿ ಎಂದು ಮನವಿ ಮಾಡಿದ್ದಾರೆ. ಸಾರ್ವಜನಿಕರು ಅನ್ಯತಾ ಭಾವಿಸಬಾರದು. ವಾರದ ನಂತರ ಎಂದಿನಂತೆ ಎಲ್ಲರನ್ನೂ ಭೇಟಿ ಮಾಡುತ್ತೇನೆ […]

Continue Reading

ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ಕರ್ನಾಟಕ ಶಾಂತಿಪ್ರಿಯ ರಾಜ್ಯ. ಶಾಂತಿ ಕದಡುವಂತಹ ಕ್ರಮಗಳನ್ನು ಬಿಟ್ಟು ಸೌಹಾರ್ದತೆ ಕಾಪಾಡುವುದು ಒಳ್ಳೆಯದು ಎಂದು ಎಲ್ಲಾ ಸಂಘಟನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದೇಶವ್ಯಾಪ್ತಿ ಶುಕ್ರವಾರ ನಡೆದ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು ಕ್ರಮ ವಹಿಸಲಾಗಿದೆ. ಇಂದು ಡಿಜಿಪಿ, ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಗೃಹ ಇಲಾಖೆ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಲಾಗಿದ್ದು, ಕರ್ನಾಟಕದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಈ ಶಾಂತಿ ಸೌಹಾರ್ದತೆಯನ್ನು ಸಂಪೂರ್ಣವಾಗಿ ಕಾಪಾಡಿಕೊಳ್ಳಲು […]

Continue Reading

ಬೋಲ್ಡ್ ಫೋಟೋ ಶೂಟ್’ನಲ್ಲಿ ಮಿಂಚಿದ ನಭಾ ನಟೇಶ್

ವಜ್ರಕಾಯ ಸಿನಿಮಾದ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಪಡೆದ ನಟಿ ಇಸ್ಮಾರ್ಟ್‌ ಶಂಕರ್‌ ತೆಲುಗು ಚಿತ್ರದಿಂದ ಟಾಲಿವುಡ್​​ನಲ್ಲಿ ಅಭಿಮಾನಿಗಳ ಮನಗೆದ್ದ ನಭಾ ನಟ ಸಾಯಿ ಧರಂ ತೇಜ್ ಅಭಿನಯದ ‘ಸೋಲೋ ಲೈಫೇ ಸೋ ಬೆಟರ್‌’ ಚಿತ್ರದಲ್ಲಿ ಬ್ಯೂಸಿಯಾದ ಪಟಾಕ ಪಾರ್ವತಿ ಹಾಟ್​ಲುಕ್​ನಲ್ಲಿ ಕಂಗೊಳಿಸಿದ ಬ್ಯೂಟಿ ಕ್ಯಾಮರಾದಲ್ಲಿ ಸೆರೆಯಾದ ನಭಾ ನಟೇಶ್ ಬೋಲ್ಡ್ ಲುಕ್

Continue Reading