ಕೇಂದ್ರದಿಂದ ಒಪ್ಪಿಗೆ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ: ಸಲೀಂ ಅಹ್ಮದ್

ರಾಜಕೀಯ

ಬೆಂಗಳೂರು: ಕೇಂದ್ರದಿಂದ ಒಪ್ಪಿಗೆ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮ ದ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆ ಅತ್ಯಂತ ಯಶಸ್ವಿಯಾಗಿದೆ. ಅದರ ಫಲವಾ ಗಿಯೇ ಸರ್ಕಾರ ಹಣ ಬಿಡುಗಡೆ ಮಾಡಿ ತನಗೆ ಆಗಬಹುದಾದ ಮುಜುಗರವನ್ನು ತಪ್ಪಿಸಿಕೊಂಡಿದೆ. ನಮ್ಮ ಹೋರಾಟ ಇಲ್ಲಿಗೆ ನಿಲ್ಲಲ್ಲ. ಸರ್ಕಾರ ಕೇಂದ್ರ ಪರಿಸರ ಇಲಾಖೆ ಜೊತೆ ಮಾತುಕತೆ ನಡೆಸಿ ಯೋಜನೆ ಜಾರಿಗೆ ಬರುವವರೆಗೂ ಹೋರಾಡುತ್ತೇವೆ. ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆ ಸಂದರ್ಭ ಯೋಜನೆಯನ್ನು ಜಾರಿಗೆ ತಂದೇ ತರುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ತಿಳಿಸಿದ್ದಾರೆ.

Leave a Reply

Your email address will not be published.