ಚಿನ್ನದಂಗಡಿ ಗೋಡೆ ಕೊರೆದು ಚಿನ್ನಾಭರಣ ಹೊತ್ತೊಯ್ದ ಕಳ್ಳರು..! ಆರೋಪಿಗಳ ಪತ್ತೆಗೆ ಶೋಧ ಕಾರ್ಯ

ಬೆಂಗಳೂರು

ಬೆಂಗಳೂರು: ಬೆಂಗಳೂರಿನ ಚಿನ್ನದಂಗಡಿಯೊಂದರಲ್ಲಿ ಗೋಡೆ ಕೊರೆದು ಖದೀಮರು ತಮ್ಮ ಕೈಚಳಕ ತೋರಿರುವ ಘಟನೆ ನಗರದ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಹೆಣ್ಣೂರು ಬಳಿಯ ಸಾರಾಯಿಪಾಳ್ಯದ ರಾಘವೇಂದ್ರ ಜ್ಯುವೆಲ್ಲರಿ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಚಿನ್ನದಂಗಡಿಯ ಸಿಸಿಟಿವಿ ಡಿಸಿಆರ್ ಅನ್ನು ಕೂಡ ಹೊತ್ತೊಯ್ದಿದ್ದಾರೆ. ಈ ಸಂಬಂಧ ಅಂಗಡಿ ಮಾಲೀಕ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಅನ್ವಯ ಪೊಲೀಸರು ಅಂಗಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ. ಅಲ್ಲದೇ ಈ ಕಳ್ಳರು ಪುಲಿಕೇಶಿ ನಗರದ ಮುತ್ತೂಟ್ ಫೈನಾನ್ಸ್ ನಲ್ಲೂ ಕೆಜಿ ಚಿನ್ನಾರಣವನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published.