ಟ್ರಾಕ್ಟರ್ ಗೆ ಡಿಕ್ಕಿ ತಪ್ಪಿಸಲು ಜಮೀನಿಗೆ ನುಗ್ಗಿದ ಸರ್ಕಾರಿ ಬಸ್; 70 ಕ್ಕೂ ಹೆಚ್ಚು ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರು

ಜಿಲ್ಲೆ

ಮಂಡ್ಯ :- ಟ್ರ್ಯಾಕ್ಟರ್​ಗೆ ಡಿಕ್ಕಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಜಮೀನಿಗೆ ನುಗ್ಗಿ ಸ್ವಲ್ಪದಲ್ಲಿಯೇ ಭಾರಿ ಅನಾಹುತವೊಂದು ತಪ್ಪಿದ ಘಟನೆ ಮಂಡ್ಯದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮಂಡ್ಯ ತಾಲೂಕಿನ ದುದ್ದ ಗ್ರಾಮದ ಬಳಿ ಈ ಅನಾಹುತ ಸಂಭವಿಸಿದ್ದು, ಚಾಲಕನಿಂದಾಗಿ ಕೂದಲೆಳೆ ಅಂತರದಲ್ಲಿ ಬಸ್ಸಿನಲ್ಲಿದ್ದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು,

ಸ್ವಲ್ಪದರಲ್ಲೇ ಅಪಘಾತ ತಪ್ಪಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬಸ್​ ತುಂಬಾ ವಿದ್ಯಾರ್ಥಿಗಳೇ ತುಂಬಿದ್ದರು.  ಇನ್ನು ಘಟನೆಯಿಂದ ಮಕ್ಕಳು ಆತಂಕಕ್ಕೆ ಒಳಗಾಗಿದ್ದು, ಅದೃಷ್ಟವಶಾತ್​ ಯಾವುದೇ ಹಾನಿಯಾಗಲಿಲ್ಲ. ಮೇಲುಕೋಟೆಯಿಂದ ಮಂಡ್ಯಗೆ ಬಸ್​ ಬರುತ್ತಿದ್ದ ವೇಳೆ ದುದ್ದ ಗ್ರಾಮದ ಬಳಿ ಬರುತ್ತಿದ್ದಂತೆ ಈ ಘಟನೆ ಸಂಭವಿಸಿದೆ. ಏಕಾಏಕಿ ಟ್ರ್ಯಾಕ್ಟರ್​ ಅಡ್ಡ ಬಂದಿದೆ. ಅದನ್ನು ತಪ್ಪಿಸಲು ಬಲಭಾಗಕ್ಕೆ ಸ್ಟೇರಿಂಗ್ ತಿರುಗಿಸಿದಾಗ ಬಸ್​ ಜಮೀನಿಗೆ ನುಗ್ಗಿದೆ ಎನ್ನಲಾಗಿದೆ.

Leave a Reply

Your email address will not be published.