Ukraine Russia War…ಇದೇ ಮೊದಲ ಬಾರಿಗೆ ಐತಿಹಾಸಿಕ ಏಸುಕ್ರಿಸ್ತನ ಶಿಲ್ಪ ಸ್ಥಳಾಂತರ

ಅಂತರಾಷ್ಟ್ರೀಯ

ಕೀವ್ರಷ್ಯಾ-ಉಕ್ರೇನ್ ಯುದ್ಧ ನಡೆಯುತ್ತಿರುವಂತೆಯೇ, ಎಲ್ವಿವ್‍ನ ಅರ್ಮೇನಿಯನ್ ಕ್ಯಾಥೆಡ್ರಲ್‍ನಲ್ಲಿರುವ ಯೇಸುಕ್ರಿಸ್ತನ ಶಿಲ್ಪವನ್ನು ಸ್ಥಳಾಂತರ ಮಾಡಲಾಗಿದೆ ಎಂದು ಪೂರ್ವ ಯುರೋಪಿಯನ್ ಮಾಧ್ಯಮ ಸಂಸ್ಥೆ ನೆಕ್ಸ್‌ಟಾ ವರದಿ ಮಾಡಿದೆ. ಈ ಹಿಂದೆ ವಿಶ್ವ ಸಮರ 2ರ (1939-1945) ಸಮಯದಲ್ಲಿ ಕ್ಯಾಥೆಡ್ರಲ್ ಚರ್ಚ್‍ನಿಂದ ಕೊನೆಯ ಬಾರಿಗೆ ಈ ಯೇಸುಕ್ರಿಸ್ತನ ಪ್ರತಿಮೆಯನ್ನು ಸ್ಥಳಾಂತರಿ ಸಲಾಗಿತ್ತು. ಫೆಬ್ರವರಿ 24 ರಂದು ರಷ್ಯಾ ಉಕ್ರೇನಿಯನ್ ನಗರಗಳನ್ನು ಆಕ್ರಮಿಸಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಫೆಬ್ರವರಿ 24 ರಂದು ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದರು. ಅಂದಿನಿಂದ ರಷ್ಯಾದ ಮಿಲಿಟರಿ ನೂರಾರು ಕ್ಷಿಪಣಿ ಮತ್ತು ಫಿರಂಗಿ ದಾಳಿಗಳನ್ನು ದೇಶಾದ್ಯಂತ ಮತ್ತು ಇತರ ಸೈಟ್‍ಗಳ ಮೇಲೆ ನಡೆಸಿವೆ.

Leave a Reply

Your email address will not be published.