ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ: ಭೂ ಕುಸಿತದ ಆತಂಕ

ಜಿಲ್ಲೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ, ಭೂ ಕುಸಿತದ ಆತಂಕ ಉಂಟಾಗಿರುವಂತಹ ಘಟನೆ ಹೊನ್ನಾವರ ತಾಲೂಕಿನ ಕೆಳಗಿನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಪ್ಸರಕೊಂಡದಲ್ಲಿ ನಡೆದಿದೆ. ಸ್ಥಳಕ್ಕೆ ಗಣಿ ಇಲಾಖೆ, ಕಂದಾಯ, ನೋಡೆಲ್ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ಮಾಡಿದರು. ಭೂ ಕುಸಿತದ ಪ್ರದೇಶದಲ್ಲಿದ್ದ ಕುಟುಂಬಸ್ಥರನ್ನ ಕಾಳಜಿ ಕೇಂದ್ರಕ್ಕೆ ಶಿಪ್ಟ್ ಮಾಡಲಾಗಿದೆ. 12 ಜನರನ್ನು ಕಾಳಜಿ ಕೇಂದ್ರಕ್ಕೆ ಶಿಪ್ಟ್ ಮಾಡಿದ್ದು, 3 ದಿನಗಳ ಕಾಲ ಕಾಳಜಿ ಕೇಂದ್ರದಲ್ಲಿರುವಂತೆ ಸೂಚನೆ ನೀಡಲಾಗಿದೆ.

Leave a Reply

Your email address will not be published.