
ವೀರಶೈವ ಲಿಂಗಾಯತರನ್ನು OBC ಪಟ್ಟಿಗೆ ಸೇರಿಸಲು ಕೇಂದ್ರ ಮುಂದಾಗಲಿ: KPCC ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
ಬೆಂಗಳೂರು: ವೀರಶೈವ ಲಿಂಗಾಯತರನ್ನು OBC ಪಟ್ಟಿಗೆ ಸೇರಿಸಲು ಕೇಂದ್ರ ಮುಂದಾಗಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಸಂಬಂಧ ಫ್ರೀಡಂ ಪಾರ್ಕಿನಲ್ಲಿ ಮಾತನಾಡಿದ ಅವರು, ಸಮುದಾಯದ ಪ್ರಮುಖ ಮುಖಂಡರೇ ಎಲ್ಲರೂ ಸೇರಿ ಎಲ್ಲೆಡೆ ಹೋರಾಟ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರ ಒಬಿಸಿ ಪಟ್ಟಿಯಲ್ಲಿ ನಮ್ಮನ್ನು ಸೇರಿಸಬೇಕು ಎಂಬ ಬೇಡಿಕೆ ಬಹು ದಿನಗಳಿಂದಲೂ ಇತ್ತು. ಇಂದು ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಈ ಒಂದು ಶಿಫಾರಸು ಹೋಗಬೇಕು. ಕಳೆದ ಮೂರು ದಶಕಗಳಿಂದಲೂ ನಮ್ಮ ಹೋರಾಟ ನಡೆಯುತ್ತಲೇ ಇದೆ.
ಈ ಮೀಸಲಾತಿಯಿಂದ ವಂಚಿತರಾಗಿ ನಮ್ಮ ಸಮುದಾಯದ ಯುವಕ-ಯುವತಿಯರು ಹಲವು ಕ್ಷೇತ್ರಗಳಲ್ಲಿ ಉದ್ಯೋಗ ವಂಚಿತರಾ ಗಿದ್ದಾರೆ. ದೇಶದ ಸಾಂಸ್ಕೃತಿಕ ಇತಿಹಾಸಕ್ಕೆ ನಮ್ಮ ಸಮುದಾಯದ ಮಠಮಾನ್ಯಗಳ ಕೊಡುಗೆ ಸಾಕಷ್ಟಿದೆ ಎಂದು ಹೇಳಿದರು. ನಾವು ಯಾರಿಗೂ ಲಭಿಸಿರುವ ಮೀಸಲಾತಿಯನ್ನು ಕಿತ್ತು ನಮಗೆ ಕೊಡಿ ಎಂದು ಕೇಳುತ್ತಿಲ್ಲ. ನಮಗೆ ನಮ್ಮದೇ ಆದ ಸಾಮಾಜಿಕ ನ್ಯಾಯವನ್ನು ಒದಗಿಸಿ ಕೊಡಿ ಎಂದು ಕೇಳುತ್ತಿದ್ದೇವೆ ಎಂದು ಆಗ್ರಹಿಸಿದರು..