
ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದಾರೆ. ಬೆಂಗಳೂರಿನ ವೀರೇಂದ್ರ ಹೆಗ್ಗಡೆಯವರ ನಿವಾಸಕ್ಕೆ ನಿನ್ನೆ ರಾತ್ರಿ ಭೇಟಿ ನೀಡಿ ಶಾಲು ಹೊದಿಸಿ ಅಭಿನಂದನೆ ಸಲ್ಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ‘ವೀರೇಂದ್ರ ಹೆಗ್ಗಡೆ ಅವರಿಗೂ ನನಗೂ ಇರುವ ಸಂಬಂಧ ಧರ್ಮಸ್ಥಳದ ಮಂಜುನಾಥ ಸ್ವಾಮಿಗೂ ಹಾಗೂ ಭಕ್ತನಿಗೂ ಇರುವ ಸಂಬಂಧದಂತೆ’. ಈ ಬಗ್ಗೆ ನನಗೆ ಬಹಳ ಪ್ರೀತಿ, ಗೌರವವಿದೆ.