ಸಕಲ ಸರ್ಕಾರಿ ಗೌರವಗಳೊಂದಿಗೆ ಶಿವಮೊಗ್ಗ ಸುಬ್ಬಣ್ಣ ಅಂತ್ಯಕ್ರಿಯೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು

ಬೆಂಗಳೂರು : ಶಿವಮೊಗ್ಗ ಸುಬ್ಬಣ್ಣ ಅವರ ಅಂತ್ಯಕ್ರಿಯೆಯನ್ನು  ಸಕಲ  ಸರಕಾರಿ  ಗೌರವಗಳೊಂದಿಗೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು  ಇಟ್ಟು ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದರು.

ಶಿವಮೊಗ್ಗ ಸುಬ್ಬಣ್ಣ ಅವರು ಸಾಹಿತ್ಯ, ಸಂಗೀತ, ಹಾಡುಗಾರಿಕೆ ಯಲ್ಲಿ ಪರಿಣಿತರಾಗಿದ್ದರು. ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿ ದ್ದಾರೆ. ಕರ್ನಾಟಕದ ಮನೆ ಮನೆಗೆ ಹಾಡುಗಳನ್ನು ಮುಟ್ಟಿಸಿದ್ದಾರೆ. ಜನ ಅವರ ಹಾಡುಗಳನ್ನು  ಕೇಳಿ ಆನಂದಿಸಿ ಪ್ರೇರಣೆ ಪಡೆದಿದ್ದಾರೆ. ಇಂಥ ಮಹಾನ್ ಕಲಾವಿದರನ್ನು ಕಳೆದುಕೊಂಡು ಕನ್ನಡ ನಾಡು ಹಾಗೂ ಕನ್ನಡದ ಸಾಂಸ್ಕೃತಿಕ ಲೋಕ ಬಡವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ  ಮುಖ್ಯಮಂತ್ರಿಗಳು ತಿಳಿಸಿದರು.

Leave a Reply

Your email address will not be published.