ಅಯ್ಯೋ.. ಮುಖದ ಮೇಲಿನ ಕಲೆಗಳಿಗೆ ಮನನೊಂದು ಯುವತಿ ಆತ್ಮಹತ್ಯೆ..!

ಅಪರಾಧ ಜಿಲ್ಲೆ

ನೆಲಮಂಗಲ: ಮುಖದ ಮೇಲಿನ ಕಲೆಗಳಿಗೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ ನಡೆದಿದೆ. ಮಹಾಲಕ್ಷ್ಮೀ(22) ಎಂಬ ಯುವತಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಿಪ್ಲೊಮಾ ಮುಗಿಸಿ BEL ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ ಯುವತಿ ಮನೆಯಲ್ಲಿ ಯಾರು ಇಲ್ಲದ ವೇಳೆ ಸೀರೆ ಬಳಸಿ ನೇಣಿಗೆ ಶರಣಾಗಿದ್ದಾರೆ. ಸಪ್ತಗಿರಿ ಆಸ್ಪತ್ರೆಯಲ್ಲಿ ಮೃತ ಯುವತಿಗೆ ಮರಣೋತ್ತರ ಪರೀಕ್ಷೆ ನಡೆಸಲಾ ಗಿದ್ದು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.