
ಯಲಹಂಕ ಕ್ಷೇತ್ರದ ಅನಂತಪುರ ಗೇಟ್ ನಲ್ಲಿ ನೂತನ ಬಸ್ ನಿಲ್ದಾಣ ಉದ್ಘಾಟಿಸಿದ ಶಾಸಕ SR ವಿಶ್ವನಾಥ್
ಯಲಹಂಕ ವಿಧಾನಸಭಾ ಕ್ಷೇತ್ರದ ಅನಂತಪುರ ಗೇಟ್ ನಲ್ಲಿ ನೂತನ ಬಸ್ ನಿಲ್ದಾಣವನ್ನು ಸ್ಥಳೀಯ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಉದ್ಘಾಟಿಸಿದರು. ಬಳಿಕ ಶಾಸಕರ ಅನುದಾನದಡಿಯಲ್ಲಿ ಸುಮಾರು 10 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ನೂತನ ಕಾಮಗಾರಿ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಶಾಸಕರು, ತ್ವರಿತಗತಿಯಲ್ಲಿ ಗುಣಮಟ್ಟದ ಕಾಮಗಾರಿ ನಿರ್ಮಿಸುವಂತೆ ಸೂಚನೆ ನೀಡಿದರು. ಬಳಿಕ ಬಿಬಿಎಂಪಿ ಅಧಿಕಾರಿಗಳ ಜೊತೆ ಕೆಲವು ಸಮಯ ಚರ್ಚೆ ನಡೆಸಿದರು. ಇದೇ ವೇಳೆ ಅಲ್ಲಿನ ಸ್ಥಳೀಯರ ಕುಂದುಕೊರತೆಗಳನ್ನು ಆಲಿಸಿ ಶೀಘ್ರವೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯರು, ಮುಖಂಡರು, ಕಾರ್ಯಕರ್ತರು, ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.