ಯಡಿಯೂರಪ್ಪನವರ ನಿವಾಸಕ್ಕೆ ತೆರಳಿ ಅಚ್ಚರಿ ಮೂಡಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಯಡಿಯೂರಪ್ಪನವರ ನಿವಾಸಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದ್ದ ಅವರು ಮಾತುಕತೆ ನಡೆಸಿದ್ದಾರೆ. ಆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಭೇಟಿಯಲ್ಲಿ ವಿಶೇಷವೇನಿಲ್ಲ.

ಯಡಿಯೂರಪ್ಪನವರು ನನಗೆ ಗುರು ಸಮಾನರಾಗಿದ್ದು, ಗುರು ಪೂರ್ಣಿಮೆ ನಿಮಿತ್ತ ಅವರನ್ನು ಭೇಟಿ ಮಾಡಿದ್ದೇನೆ ಎಂದರು. ರಾಜಕೀಯ ವಾಗಿ ನನ್ನ ಹಾಗೂ ಯಡಿಯೂರಪ್ಪನವರ ವಿಚಾರಧಾರೆ ಬೇರೆಯಿರಬಹುದು. ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತೇನೆ. ಹಾಗೆಯೇ ಇಂದು ಕೂಡಾ ಸೌಹಾರ್ದಯುತವಾಗಿ ಭೇಟಿ ಮಾಡಿದ್ದೇನೆ ಎಂದರು.

 

Leave a Reply

Your email address will not be published.