
ಕೋವಿಡ್ ಗೆ ಬಲಿಯಾದ ಯುವ ನಟ ಕಿಶೋರ್ ದಾಸ್
ಸಿನಿಮಾ ಹಾಗೂ ಸೀರಿಯಲ್ ಮೂಲಕ ಸಾಕಷ್ಟು ಖ್ಯಾತಿ ಘಳಿಸಿದ್ದ ಅಸ್ಸಾಂನ ಕಿಶೋರ್ ದಾಸ್ ವಿಧಿವಶರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಕಿಶೋರ್ ದಾಸ್ ಗೆ ಇತ್ತೀಚೆಗೆ ಕೊರೋನಾ ಸೋಂಕು ತಗುಲಿದ್ದು ಮತ್ತಷ್ಟು ಆರೋಗ್ಯ ಹದಗೆಟ್ಟಿತ್ತು.
ಯುವ ನಟನ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದ್ದು ಅತಿ ಚಿಕ್ಕ ವಯಸ್ಸಿನಲ್ಲಿ ಪ್ರಾಣ ಬಿಟ್ಟಿದ್ದಕ್ಕೆ ಚಿತ್ರರಂಗ ಬೆಚ್ಚಿ ಬಿದ್ದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕಿರೋರ್ ದಾಸ್ ಗೆ ಇತ್ತೀಚೆಗೆ ಕೊರೋನಾ ಸೋಂಕು ತಗುಲಿತ್ತು. ಹೀಗಾಗಿ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರು ಎಳೆದಿದ್ದಾರೆ.
ಕಿಶೋರ್ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲು ಅವರ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಕೋವಿಡ್ ಪ್ರೋಟೋಕಾಲ್ ಪ್ರಕಾರ ಅವರ ಅಂತಿಮ ಸಂಸ್ಕಾರ ಚೆನ್ನೈನಲ್ಲಿ ನಡೆಯಲಿದೆ. ಇನ್ನು ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ನಟನ ಮೃತ ದೇಹವನ್ನು ಸ್ವಗ್ರಾಮಕ್ಕೂ ಕಳುಹಿಸಲಾಗುತ್ತಿಲ್ಲ. ಇದರಿಂದ ನಟನ ಅಂತಿಮ ದರ್ಶನಕ್ಕೆ ಕಾದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ನಟ ಕಿಶೋರ್ ದಾಸ್ ನಿಧನಕ್ಕೆ ಅಭಿಮಾನಿಗಳು, ಚಿತ್ರರಂಗದ ಸ್ನೇಹಿತರು, ಆಪ್ತರ ಕಂಬನಿ ಮಿಡಿದಿದ್ದಾರೆ.